ಹೆಂಗೆಳೆಯರಿಗೆ ಬೇಸರದ ಸುದ್ದಿ; ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ…..!

ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆಯಾಗಿದೆ. ದೆಹಲಿಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ವಹಿವಾಟು ತೀವ್ರಗತಿಯಲ್ಲಿತ್ತು. ಜಾಗತಿಕ ಮಾರುಕಟ್ಟೆಯಲ್ಲೂ ಚಿನ್ನ ಮತ್ತು ಬೆಳ್ಳಿ ದುಬಾರಿಯಾಗಿವೆ. ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 57,000 ರೂಪಾಯಿ ಆಗಿತ್ತು. ಬೆಳ್ಳಿ ಕೆಜಿಗೆ 66,900ರ ಆಸುಪಾಸಿನಲ್ಲಿದೆ. ದೆಹಲಿಯ ಬುಲಿಯನ್ ಮಾರುಕಟ್ಟೆಯಲ್ಲಿ ಪ್ರತಿ 10 ಗ್ರಾಂ ಚಿನ್ನದ ಬೆಲೆ 480 ರೂಪಾಯಿ ಏರಿಕೆಯಾಗಿ 57,380 ರೂಪಾಯಿಗಳಿಗೆ ತಲುಪಿದೆ. ಕಳೆದ ವಹಿವಾಟಿನಲ್ಲಿ, ಚಿನ್ನದ ಬೆಲೆ 10 ಗ್ರಾಂಗೆ 56,900 ರೂಪಾಯಿ ಇತ್ತು. ಬೆಳ್ಳಿಯ ಬೆಲೆಯು ಸಹ 2,150 ರೂಪಾಯಿ ಜಿಗಿತ ಕಂಡಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಎಷ್ಟು?

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನದ ಬೆಲೆ ಹೆಚ್ಚಾಗಿದೆ. ಚಿನ್ನವು ಪ್ರತಿ ಔನ್ಸ್‌ಗೆ 1,909 ಡಾಲರ್‌ಗೆ ಏರಿದೆ. ಬೆಳ್ಳಿ ದರ ಸ್ಥಿರವಾಗಿದ್ದು, ಪ್ರತಿ ಔನ್ಸ್‌ಗೆ  20.80 ಡಾಲರ್‌ನಷ್ಟಾಗಿದೆ.

ತಜ್ಞರ ಅಭಿಪ್ರಾಯವೇನು?

ಅಮೆರಿಕದ ಎರಡು ಪ್ರಾದೇಶಿಕ ಬ್ಯಾಂಕ್‌ಗಳ ಕುಸಿತದ ನಂತರ ಫೆಡರಲ್ ರಿಸರ್ವ್ ಬಡ್ಡಿದರ ಹೆಚ್ಚಳ ಚಿನ್ನದ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ. ಚಿನ್ನದ ದರ ಸ್ಥಿರತೆ ಕಾಯ್ದುಕೊಳ್ಳಲಿದೆ ಎನ್ನುತ್ತಾರೆ ತಜ್ಞರು.

ಚಿನ್ನ ಖರೀದಿಸುವ ಮುನ್ನ ಗಮನವಿರಲಿ

ನೀವು ಕೂಡ ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಕೊಂಡುಕೊಳ್ಳಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ನೀವು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ನೀವು ಚಿನ್ನದ ಶುದ್ಧತೆ ನಿಜವೇ ಅಥವಾ ನಕಲಿಯೇ ಎಂಬುದನ್ನು ಪರಿಶೀಲಿಸಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read