HomeKarnataka'ಹೈಕೋರ್ಟ್' ನಲ್ಲಿಂದು ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆ

‘ಹೈಕೋರ್ಟ್’ ನಲ್ಲಿಂದು ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ.

ನ್ಯಾಯಮೂರ್ತಿ ಪಿ‌.ಎಂ‌. ನವಾಜ್ ಅವರ ಏಕ ಸದಸ್ಯ ಪೀಠ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಜಾಮೀನು ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲಿದ್ದು, ಶ್ರೀಗಳ ಪರವಾಗಿ ಸಂದೀಪ್ ಎಸ್ ಪಾಟೀಲ್ ವಕಾಲತ್ತು ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶ್ರೀ ಮಠದಿಂದ ನಡೆಸುತ್ತಿರುವ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ 2022ರ ಸೆಪ್ಟೆಂಬರ್ 1 ರಿಂದ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಶರಣರು ಜಾಮೀನು ನೀಡುವಂತೆ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular