1 ವರ್ಷದ ನಂತರ ಸಚಿವ ಸ್ಥಾನದ ಭರವಸೆ; ಡೆಪ್ಯೂಟಿ ಸ್ಪೀಕರ್ ಆಗಲು ಒಪ್ಪಿದ ಶಾಸಕ ಪುಟ್ಟರಂಗ ಶೆಟ್ಟಿ

ಬೆಂಗಳೂರು: ವಿಧಾನಸಭಾ ಡೆಪ್ಯೂಟಿ ಸ್ಪೀಕರ್ ಆಗಲು ಕೊನೆಗೂ ಚಾಮರಾಜನಗರ ಕ್ಷೇತ್ರದ ಶಾಸಕ ಸಿ. ಪುಟ್ಟರಂಗ ಶೆಟ್ಟಿ ಒಪ್ಪಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪುಟ್ಟರಂಗ ಶೆಟ್ಟಿ, 1 ವರ್ಷದ ನಂತರ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಹಾಗಾಗಿ ಡೆಪ್ಯುಟಿ ಸ್ಪೀಕರ್ ಆಗಲು ಒಪ್ಪಿದ್ದೇನೆ ಎಂದರು.

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರವಾಗಿತ್ತು. ನಾನು ಕಾಂಗ್ರೆಸ್ ಕಟ್ಟಾಳು. ವರಿಷ್ಠರು ಹೇಳಿದ್ದನ್ನು ಒಪ್ಪಬೇಕು. 1 ವರ್ಷದ ನಂತರ ಮಂತ್ರಿ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಹಾಗಾಗಿ ಒಪ್ಪಿದ್ದೇನೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read