HomeInternationalBREAKING NEWS: ನ್ಯೂಯಾರ್ಕ್ ಸಾರ್ವಜನಿಕ ಉದ್ಯಾನದಲ್ಲಿ ಗುಂಡಿನ ದಾಳಿ

BREAKING NEWS: ನ್ಯೂಯಾರ್ಕ್ ಸಾರ್ವಜನಿಕ ಉದ್ಯಾನದಲ್ಲಿ ಗುಂಡಿನ ದಾಳಿ

ನ್ಯೂಯಾರ್ಕ್‌ ನ ರೋಚೆಸ್ಟರ್‌ನಲ್ಲಿರುವ ಪಾರ್ಕ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬರು ಸಾವು ಕಂಡಿದ್ದು, 6 ಜನ ಗಾಯಗೊಂಡಿದ್ದಾರೆ.

ಭಾನುವಾರ ಸಂಜೆ ನ್ಯೂಯಾರ್ಕ್‌ನ ರೋಚೆಸ್ಟರ್‌ನಲ್ಲಿರುವ ಸಾರ್ವಜನಿಕ ಉದ್ಯಾನವನದಲ್ಲಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರೋಚೆಸ್ಟರ್ ಫಸ್ಟ್ ವರದಿಯ ಪ್ರಕಾರ, ಅಧಿಕಾರಿಗಳಿಗೆ ಸಂಜೆ(ಸ್ಥಳೀಯ ಸಮಯ) 6:20 ರ ಸುಮಾರಿಗೆ ಉದ್ಯಾನವನದಲ್ಲಿ ಫೈರಿಂಗ್ ಆದ ಮಾಹಿತಿ ಬಂದಿದೆ. ಕೂಡಲೇ ಕಾರ್ಯಪ್ರವೃತ್ತರಾಗಿ ಸ್ಥಳಕ್ಕೆ ತೆರಳಿದ್ದಾರೆ. ಗುಂಡೇಟಿನ ಗಾಯಗಳಿಂದ ಬಳಲುತ್ತಿರುವ ಅನೇಕ ಜನರು ಮತ್ತು ದೊಡ್ಡ ಜನಸಮೂಹವು ಸ್ಥಳದಿಂದ ಓಡಿಹೋಗುವ ದೃಶ್ಯ ಪಾರ್ಕ್ ನಲ್ಲಿ ಕಂಡು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

20 ವರ್ಷದ ಯುವಕ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular