HomeKarnatakaಪ್ರಜ್ವಲ್ ಹುಡುಕಿಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ; ಜನತಾ ಪಕ್ಷ ಕಾರ್ಯಕರ್ತರಿಂದ ಪೋಸ್ಟರ್

ಪ್ರಜ್ವಲ್ ಹುಡುಕಿಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ; ಜನತಾ ಪಕ್ಷ ಕಾರ್ಯಕರ್ತರಿಂದ ಪೋಸ್ಟರ್

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗಾಗಿ ಎಸ್ಐಟಿ ತಂಡ ಇಂಟರ್ಪೊಲ್ ನೆರವು ಪಡೆದುಕೊಂಡಿದೆ.

ಇದರ ಮಧ್ಯೆ ಜನತಾ ಪಕ್ಷ ಕರ್ನಾಟಕದ ಕೆಲ ಕಾರ್ಯಕರ್ತರು ಪ್ರಜ್ವಲ್ ರೇವಣ್ಣ ಅವರನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ಕೊಡುವುದಾಗಿ ಪೋಸ್ಟರ್ ಅಂಟಿಸಿದ್ದಾರೆ.

ಈ ಹಿನ್ನಲೆಯಲ್ಲಿ ಜನತಾ ಪಕ್ಷದ ಕಾರ್ಯಕರ್ತ ನಾಗೇಶ್ ಸೇರಿದಂತೆ ಹಲವರನ್ನು ಹೈಗ್ರೌಂಡ್ಸ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪೋಸ್ಟರ್ಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular