BIG NEWS: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಧ್ಯಮ ವರ್ಗದ ಮಹಿಳೆಯರಿಗೆ 1 ಲಕ್ಷ ರೂಪಾಯಿ; ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಹೇಳಿಕೆ

ಈ ಬಾರಿಯ ಲೋಕಸಭಾ ಚುನಾವಣೆ ಬಳಿಕ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಯಂತೆ ಮಧ್ಯಮ ವರ್ಗದ ಗೃಹಿಣೀಯರಿಗೆ ಒಂದು ಲಕ್ಷ ರೂಪಾಯಿ ಸಿಗಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ಬಳಿಕ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಕಾರ್ಯಗತಗೊಳಿಸಿದ್ದೇವೆ. ಅದರಂತೆ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಅದರಂತೆ ನಡೆದುಕೊಳ್ಳುತ್ತೇವೆ ಎಂದರು.

ಬರ ಪರಿಹಾರ ಕೊಡದೆ ಕೇಂದ್ರ ಸರ್ಕಾರ ಕರ್ನಾಟಕದ ಜನತೆಗೆ ಅನ್ಯಾಯವೆಸಗಿದ್ದು, ಈ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದ ಸುರ್ಜೆವಾಲಾ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರಗಳಲ್ಲಿಯೂ ಸಹ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದು ಅಭಿಪ್ರಾಯಪಟ್ಟರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read