ಬೆಂಗಳೂರು : ರಾಜ್ಯದಲ್ಲಿ ಇದುವರೆಗೆ ಶೇ.4 ರಷ್ಟು ಮಾತ್ರ ‘ಜಾತಿ ಗಣತಿ ಸಮೀಕ್ಷೆ’ ನಡೆದಿದೆ, ರಾಜ್ಯದಲ್ಲಿ ಪ್ರತಿ ದಿನ ಶೇ.10 ರಷ್ಟು ‘ಜಾತಿ ಗಣತಿ ಸಮೀಕ್ಷೆ’ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದರು.
ಕಳೆದ 4 ದಿನಗಳಿಂದ ಸರ್ವೆ ಕಾರ್ಯ ಕುಂಠಿತವಾಗಿದೆ. ರಾಜ್ಯದಲ್ಲಿ ಇದುವರೆಗೆ ಶೇ.4 ರಷ್ಟು ಮಾತ್ರ ‘ಜಾತಿ ಗಣತಿ ಸಮೀಕ್ಷೆ’ ನಡೆದಿದೆ . ಪ್ರತಿದಿನ ಶೇ.10 ರಷ್ಟು ಸಮೀಕ್ಷೆ ನಡೆಸಬೇಕು, ನಡೆಸುತ್ತೇವೆ ಎಂದು ಜಿಲ್ಲಾಧಿಕಾರಿಗಳು ಒಪ್ಪಿಕೊಂಡಿದ್ದಾರೆ ಎಂದು ಸಭೆಯಲ್ಲಿ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಳೆದ 4 ದಿನಗಳಿಂದ ಜಾತಿ ಗಣತಿ ಸರ್ವೇ ಕಾರ್ಯ ಕುಂಠಿತವಾಗಿತ್ತು. ಇಂದಿನಿಂದ ಜಾತಿ ಗಣತಿ ಸರ್ವೇ ಕಾರ್ಯ ಚುರುಕಾಗಲಿದೆ. ಈ ಸಂಬಂಧ ಎಲ್ಲಾ ಜಿಲ್ಲೆಯ ಡಿಸಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.ಡಿಸಿಗಳು ಹೇಳುವ ಪ್ರಕಾರ ಶೇ.90 ರಷ್ಟು ತಾಂತ್ರಿಕ ಸಮಸ್ಯೆ ಪರಿಹಾರ ಆಗಿದೆ. ಸರ್ವೆಗೆ ಏನೆಲ್ಲಾ ತೊಡಕು ಇದ್ದಾವೆ ಅದನ್ನು ಸರಿಪಡಿಸಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ಜಾತಿ ಗಣತಿ ವೇಗ ಹೆಚ್ಚಿಸಲು ಇಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದಾರೆ. ಇಂದು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಖುದ್ದು ಸಭೆ ನಡೆಸಿ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ್ದಾರೆ. 4 ದಿನ ಕಳೆದರೂ ಸಮೀಕ್ಷೆ ಟೇಕಾಫ್ ಆಗಿಲ್ಲ. ಆದ್ದರಿಂದ ಸಮೀಕ್ಷೆಯ ವೇಗ ಹೆಚ್ಚಿಸಲು ಇಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಕರೆದಿದ್ದಾರೆ. ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಿ ಸಲಹೆ, ಸೂಚನೆಗಳನ್ನು ನೀಡಿದ್ದಾರೆ.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಕುರಿತು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದು, ಸಮೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದೆ.
— Siddaramaiah (@siddaramaiah) September 26, 2025
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಶಿವರಾಜ ತಂಗಡಗಿ, ಕೃಷ್ಣ ಭೈರೇಗೌಡ, ರಹೀಂ ಖಾನ್,… pic.twitter.com/KjS7Ln4BQ6