BIG BREAKING : `ನಮಾಮಿ ಗಂಗೆ’ ಯೋಜನಾ ಸ್ಥಳದಲ್ಲೇ `ಟ್ರಾನ್ಸ್ ಫಾರ್ಮರ್ ಸ್ಪೋಟ’ : 10 ಮಂದಿ ಕಾರ್ಮಿಕರು ದುರ್ಮರಣ

ಚಮೋಲಿ : ಉತ್ತರಾಖಂಡ್ ನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು 10 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಚಮೋಲಿ ಜಿಲ್ಲೆಯ ಅಲಕನಂದಾ ನದಿಯ ದಡದಲ್ಲಿ ಇಂದು ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡ ಪರಿಣಾಮ ಸುಮಾರು 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ಸಂತ್ರಸ್ತರು ನಮಾಮಿ ಗಂಗೆ ಯೋಜನಾ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಚಮೋಲಿ ಪೊಲೀಸ್ ವರಿಷ್ಠಾಧಿಕಾರಿ ಪರಮೇಂದ್ರ ದೋವಲ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

https://twitter.com/ANI/status/1681567790887735297

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read