HomeIndiaBREAKING : 'ರಾಮೇಶ್ವರಂ ಕೆಫೆ' ಬ್ಲಾಸ್ಟ್ ಪ್ರಕರಣ : ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10...

BREAKING : ‘ರಾಮೇಶ್ವರಂ ಕೆಫೆ’ ಬ್ಲಾಸ್ಟ್ ಪ್ರಕರಣ : ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ -NIA ಘೋಷಣೆ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣವನ್ನು ಎನ್ ಐ ಎ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದೆ. ಇದುವರೆಗೆ ಪ್ರಮುಖ ಆರೋಪಿ ಪತ್ತೆಯಾಗಿಲ್ಲ. ಆದರೆ ಆತ ಓಡಾಟ ನಡೆಸಿರುವ ಸಿಸಿಟಿವಿ ದೃಶ್ಯಾವಳಿಗಳು ಸೆರೆಯಾಗಿದೆ. ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ.

ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಕ್ಕೆ ಕಾರಣವಾದ ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ.ಗಳ ನಗದು ಬಹುಮಾನವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ಘೋಷಿಸಿದೆ. ‘ವಾಂಟೆಡ್’ ಪೋಸ್ಟರ್ನಲ್ಲಿ ಆರೋಪಿಗಳ ರೇಖಾಚಿತ್ರವನ್ನು ಎನ್ಐಎ ಬಿಡುಗಡೆ ಮಾಡಿದೆ ಮತ್ತು ಮಾಹಿತಿದಾರರ ಗುರುತನ್ನು ರಹಸ್ಯವಾಗಿಡಲಾಗುವುದು ಎಂದು ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular