ಶಿವಮೊಗ್ಗ : ತೋಟಗಾರಿಕೆ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಹಿರಿಯ ಸಹಾಯಕರ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ಅರ್ಹ ರೈತ ಮಕ್ಕಳಿಗೆ ಹಮ್ಮಿಕೊಳ್ಳಲಾಗಿರುವ 10 ತಿಂಗಳ ವಸತಿ ಸಹಿತ ತೋಟಗಾರಿಕೆ ತರಬೇತಿ ಕಾರ್ಯಕ್ರಮದ ಅರ್ಜಿ ಅವಧಿಯನ್ನು ಏ. 21 ರವರೆಗೆ ವಿಸ್ತರಿಸಲಾಗಿದೆ.
ಈ ಹಿಂದೆ ಅರ್ಜಿ ಸಲ್ಲಿಸಲು ಏಪ್ರಿಲ್ 15 ನ್ನು ಅಂತಿಮ ದಿನಾಂಕವಾಗಿ ನಿಗದಿಗೊಳಿಸಲಾಗಿತ್ತು. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ದೂರವಾಣಿ: 08182-222794 ಮೊಬೈಲ್: 9686950460 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಜಾನುವಾರುಗಳಿಗೆ ಕಾಲುಬಾಯಿ ಜ್ವರ ನಿರೋಧಕ ಲಸಿಕೆ ಕಾರ್ಯಕ್ರಮ
ಶಿವಮೊಗ್ಗ : ಜಿಲ್ಲಾ ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯು ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಏ.23 ರಿಂದ ಮೇ. 22ರವರೆಗೆ 9ನೇ ಸುತ್ತಿನ ಕಾಲುಬಾಯಿ ಜ್ವರ ನಿರೋಧಕ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖಾ ಸಿಬ್ಬಂದಿಗಳು ಮನೆಮನೆಗೆ ತೆರಳಿ ಉಚಿತವಾಗಿ ಲಸಿಕೆಯನ್ನು ಹಾಕಲಿದ್ದು, ಜಾನುವಾರು ಮಾಲೀಕರು ಇಲಾಖಾ ಸಿಬ್ಬಂದಿಗಳೊಂದಿಗೆ ಸಹಕರಿಸಿ ಕಾಲುಬಾಯಿ ರೋಗಮುಕ್ತ ಜಿಲ್ಲೆಯನ್ನಾಗಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

