ಹುಬ್ಬಳ್ಳಿಗೆ 10 ಹೊಸ ಮೆಮು ರೈಲು: ಕೇಂದ್ರ ಸಚಿವ ಜೋಶಿ ಮನವಿ

ನವದೆಹಲಿ: ಹುಬ್ಬಳ್ಳಿ -ಧಾರವಾಡ ಅಕ್ಕಪಕ್ಕದ ಪಟ್ಟಣಗಳಿಂದ ಪ್ರಯಾಣಿಸುವವರ ಅನುಕೂಲಕ್ಕಾಗಿ 10 ಹೊಸ ಮೆಮು ರೈಲು ಸಂಚಾರ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ.

ಬುಧವಾರ ದೆಹಲಿಯಲ್ಲಿ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ, ಪಟ್ಟಣ ಮತ್ತು ಗ್ರಾಮಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರಿಗೆ 10 ಹೊಸ ಮೆಮೊ ರೈಲು ಸಂಚಾರ ಆರಂಭಿಸಬೇಕೆಂದು ಕೋರಿದ್ದಾರೆ.

ಕೋವಿಡ್ 19 ಸಾಂಕ್ರಾಮಿಕ ಅವಧಿಯಲ್ಲಿ ಸ್ಥಗಿತಗೊಳಿಸಿದ ಅನೇಕ ಪ್ಯಾಸೆಂಜರ್ ರೈಲು ಸಂಚಾರ ಸಹ ಆರಂಭಿಸುವಂತೆ ಮನವಿ ಮಾಡಿದ್ದಾರೆ.

ಹುಬ್ಬಳ್ಳಿಯ ಗದಗ ರಸ್ತೆ ಮೇಲಿರುವ ಡಬಲ್ ಲೈನ್ ರೈಲ್ವೇ ಸೇತುವೆಯಲ್ಲಿ 4 ಲೈನ್ ಗಳಿಗೆ ವಿಸ್ತರಿಸಲು ಇನ್ನೊಂದು ರೈಲ್ವೆ ಸೇತುವೆ ನಿರ್ಮಾಣ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಈ ಭಾಗದಲ್ಲಿ ರಸ್ತೆ ಸಾರಿಗೆಗಿಂತ ರೈಲು ಸಂಚಾರ ಅನುಕೂಲಕರವಾಗಿದ್ದು, ಪ್ಯಾಸೆಂಜರ್ ರೈಲು ಸಹ ಆರಂಭಿಸುವಂತೆ ಕೋರಿದ್ದಾರೆ.

ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ನಿತ್ಯ 50 ಸಾವಿರಕ್ಕೆ ಅಧಿಕ ಪ್ರಯಾಣಿಕರು ಆಗಮಿಸುತ್ತಾರೆ. ನೈರುತ್ಯ ರೈಲ್ವೆ ಮುಖ್ಯ ಕಚೇರಿ ಹೊಂದಿರುವ ಹುಬ್ಬಳ್ಳಿ ನಿಲ್ದಾಣ ಭಾರತೀಯ ರೈಲ್ವೆಯಲ್ಲಿ ಮಹತ್ತರವಾಗಿದ್ದು, ಅಂತರಾಷ್ಟ್ರೀಯ ಮಟ್ಟಕ್ಕೆ ಪರಿವರ್ತಿಸುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಹುಬ್ಬಳ್ಳಿ ನಗರಕ್ಕೆ ಶಿಕ್ಷಣ, ಉದ್ಯೋಗ, ವ್ಯಾಪಾರ, ಆಸ್ಪತ್ರೆಗಳಿಗಾಗಿ ಹೆಚ್ಚಿನ ಜನ ಬರುತ್ತಾರೆ. ನಿತ್ಯದ ರೈಲುಗಳು ಭರ್ತಿ ಆಗಿರುತ್ತವೆ. ಹೀಗಾಗಿ ಜನರ ಅನುಕೂಲಕ್ಕೆ ಮೆಮು ರೈಲು ಸಂಚಾರ ಆರಂಭಿಸಬೇಕೆಂದು ಕೋರಿದ್ದಾರೆ. ಈ ಸಂದರ್ಭದಲ್ಲಿ ರೈಲ್ವೇ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ಇದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read