ಹಾಸನ: ಹಾಸನದಲ್ಲಿ ಗಣೇಶ ಮೆರವಣಿಗೆ ಮೇಲೆ ಕ್ಯಾಂಟರ್ ಹರಿದು 10ಜನ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಂಟರ್ ಚಾಲಕ ಭುವನೇಶ್ ನನ್ನು ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ಹಾಸನ ವೈದ್ಯಕೀಯ ಕಾಲೇಜು ಆಸ್ಪತ್ರೆಯಿಂದ ಭುವನೇಶ್ ನನ್ನು ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಟ್ಟೆಬೆಳಗಲಿ ನಿವಾಸಿ ಭುವನೇಶ್ ಗೆ ಬೆಳ್ಳೂರು ಕ್ರಾಸ್ ನ ಬಿಜಿಎಸ್ ಆಸ್ಪತ್ರೆ, ಹಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಭುವನೇಶ್ ನನ್ನು ಪೊಲೀಸರು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ.