HomeKarnatakaಟ್ಯಾಂಕರ್ ಹಿಂಬದಿಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 10 ಮಂದಿ ಸಾವು

ಟ್ಯಾಂಕರ್ ಹಿಂಬದಿಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 10 ಮಂದಿ ಸಾವು

ನವದೆಹಲಿ: ಅಹಮದಾಬಾದ್-ವಡೋದರಾ ಎಕ್ಸ್‌ ಪ್ರೆಸ್‌ ವೇಯ ನಾಡಿಯಾಡ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ವಡೋದರಾದಿಂದ ಅಹಮದಾಬಾದ್‌ಗೆ ತೆರಳುತ್ತಿದ್ದ ಕಾರ್ ಹಿಂಬದಿಯಿಂದ ಟ್ಯಾಂಕರ್ ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದ ನಂತರ, ವಡೋದರಾ-ಅಹಮದಾಬಾದ್ ಎಕ್ಸ್‌ ಪ್ರೆಸ್ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ನಜ್ಜುಗುಜ್ಜಾಗಿದ್ದ ಎರ್ಟಿಗಾ ಕಾರ್ ಕತ್ತರಿಸಿ ತೆರೆದು ದೇಹಗಳನ್ನು ಹೊರತೆಗೆಯಲಾಗಿದೆ.

ಎಂಟು ವ್ಯಕ್ತಿಗಳು ಅಪಘಾತದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಬ್ಬರು ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು. ವಡೋದರಾದಿಂದ ಅಹಮದಾಬಾದ್‌ಗೆ ತೆರಳುತ್ತಿದ್ದ ಎರ್ಟಿಗಾ ಕಾರು ಟ್ಯಾಂಕರ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ವಡೋದರಾ-ಅಹಮದಾಬಾದ್ ಎಕ್ಸ್‌ ಪ್ರೆಸ್‌ ವೇಯಲ್ಲಿ ತಾಂತ್ರಿಕ ದೋಷ ಕಾರಣ ಟ್ಯಾಂಕರ್ ನಿಲ್ಲಿಸಲಾಗಿತ್ತು ಎಂದು ಖೇಡಾ ಎಸ್‌ಪಿ ರಾಜೇಶ್ ಗಧ್ವಿ ಬಹಿರಂಗಪಡಿಸಿದ್ದಾರೆ. 10 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕಾರ್ ನಿಂತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅವರ ಗಾಯಗಳಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular