ವಿದ್ಯಾರ್ಥಿಗಳಿಗೆ ಸೂಪರ್ ಸುದ್ದಿ : ಸಿಗುತ್ತೆ 10 ಸಾವಿರ ರೂಪಾಯಿ ವಿದ್ಯಾರ್ಥಿ ವೇತನ

ಮಡಿಕೇರಿ : ಕರ್ನಾಟಕ ರಾಜ್ಯ ಸರ್ಕಾರದ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10 ನೇ ತರಗತಿ) ಗಳಿಗೆ ವಾರ್ಷಿಕ ರೂ.10 ಸಾವಿರ ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡುವ ಯೋಜನೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು.

ಆಸಕ್ತ ಕ್ರೀಡಾಪಟುಗಳು ಇಲಾಖಾ ಅಧಿಕೃತ ಜಾಲತಾಣ http://sevasindhuservices.karnataka.gov.in  ಆನ್ಲೈನ್ ಮೂಲಕ ಜುಲೈ, 31 ರೊಳಗೆ ಅರ್ಜಿ ಸಲ್ಲಿಸಬೇಕು.

ಅರ್ಜಿದಾರರು 2022-23 ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10 ನೇ ತರಗತಿ) ಯಲ್ಲಿ ಓದುತ್ತಿರಬೇಕು. ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು 2022 ರ ಏಪ್ರಿಲ್, 01 ರಿಂದ 2023 ರ ಮಾರ್ಚ್, 31 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ 2022 ರ ಏಪ್ರಿಲ್, 01 ರಿಂದ 2023 ರ ಮಾರ್ಚ್ 31 ರ ಅವಧಿಯಲ್ಲಿ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವುದು.

ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿ ವೇತನದ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ. ವಿದ್ಯಾರ್ಥಿ ವೇತನ ಮೊತ್ತವನ್ನು ವಾರ್ಷಿಕ ರೂ.10 ಸಾವಿರಗಳನ್ನು ಮಾತ್ರ ಮಂಜೂರು ಮಾಡಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read