BREAKING NEWS: ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್: 100 FIR ದಾಖಲು; 6 ಜನ ಅರೆಸ್ಟ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಪ್ರದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಕೆಲವು ಪೋಸ್ಟರ್‌ಗಳನ್ನು ಗೋಡೆ ಮತ್ತು ಕಂಬಗಳ ಮೇಲೆ ಅಂಟಿಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು 100 ಎಫ್‌ಐಆರ್‌ಗಳನ್ನು ದಾಖಲಿಸಿ ಆರು ಜನರನ್ನು ಬಂಧಿಸಿದ್ದಾರೆ.

ಪೋಸ್ಟರ್‌ಗಳಲ್ಲಿ ಪ್ರಿಂಟಿಂಗ್ ಪ್ರೆಸ್‌ ವಿವರಗಳಿರಲಿಲ್ಲ. ಪ್ರಿಂಟಿಂಗ್ ಪ್ರೆಸ್ ಆಕ್ಟ್ ಮತ್ತು ಆಸ್ತಿ ವಿರೂಪಗೊಳಿಸುವ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವಿಶೇಷ ಸಿಪಿ ದೀಪೇಂದ್ರ ಪಾಠಕ್ ಹೇಳಿದ್ದಾರೆ.

ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು (‘ಮೋದಿ ಹಠಾವೋ, ದೇಶ್ ಬಚಾವೋ’) ಕಿತ್ತೊಗೆಯುವಂತೆ ಭಿತ್ತಿಪತ್ರಗಳಲ್ಲಿ ಪ್ರಿಂಟ್ ಮಾಡಲಾಗಿದೆ.

ಎಎಪಿ ಕಚೇರಿಯಿಂದ ಹೊರಟ ತಕ್ಷಣ ವ್ಯಾನ್ ಕೂಡ ಅಡ್ಡಗಟ್ಟಿದೆ. ಕೆಲವು ಪೋಸ್ಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. 6 ಮಂದಿ ಬಂಧಿಸಲಾಗಿದೆ. ತನಿಖೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read