ಬಿಸಿಯೂಟದಲ್ಲಿತ್ತು ಹಾವಿನ ಮರಿ; ಆಹಾರ ಸೇವಿಸಿದ ನೂರಕ್ಕೂ ಅಧಿಕ ಮಕ್ಕಳು ಅಸ್ವಸ್ಥ

ಬಿಹಾರದಲ್ಲಿ ನಡೆದ ಆಘಾತಕಾರಿ ಘಟನೆ ಒಂದರಲ್ಲಿ ಶಾಲಾ ಮಕ್ಕಳಿಗೆ ನೀಡಲಾಗಿದ್ದ ಮಧ್ಯಾಹ್ನದ ಬಿಸಿಯೂಟದಲ್ಲಿ ಹಾವಿನ ಮರಿ ಪತ್ತೆಯಾಗಿದೆ. ಆದರೆ ಇದಕ್ಕೂ ಮುನ್ನ ಆಹಾರ ಸೇವಿಸಿದ್ದ ನೂರಕ್ಕೂ ಅಧಿಕ ಮಕ್ಕಳು ಅಸ್ವಸ್ಥಗೊಂಡಿದ್ದಾರೆ.

ಶನಿವಾರದಂದು ಬಿಹಾರದ ಅರಾರಿಯಾ ಜಿಲ್ಲೆಯ ಫೋರ್ಬ್ ಗಂಜ್ ಉಪವಿಭಾಗ ಜೋಗ್ಬಾನಿಯ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮಕ್ಕಳಿಗೆ ಮಧ್ಯಾಹ್ನದ ಊಟ ವಿತರಿಸಲು ಕಿಚಡಿ ತಯಾರಿಸಲಾಗಿದ್ದು, ಅದನ್ನು ನೀಡಲಾಗಿತ್ತು.

ಕೆಲ ಹೊತ್ತಿನ ಬಳಿಕ ಬಿಸಿಯೂಟದಲ್ಲಿ ಹಾವಿನ ಮರಿ ಪತ್ತೆಯಾಗಿದ್ದು, ಅಷ್ಟರಲ್ಲಾಗಲೇ ಆಹಾರ ಸೇವಿಸಿದ್ದ ಬಹುತೇಕ ಮಕ್ಕಳಲ್ಲಿ ವಾಂತಿ, ಭೇದಿ ಶುರುವಾಗಿದೆ. ಇದರಿಂದ ಆತಂಕಗೊಂಡ ಶಿಕ್ಷಕರು ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read