ದೊಡ್ಡಬಳ್ಳಾಪುರ: ಇ- ಸ್ವತ್ತು ನೀಡಲು 10,000 ರೂ. ಲಂಚ ಪಡೆದಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ಬೆಳವಂಗಲ ಹೋಬಳಿ ಹಾದ್ರಿಪುರ ಗ್ರಾಮ ಪಂಚಾಯಿತಿ ಪಿಡಿಒ ಶಿವಾನಂದ ಮರಿಕೇರಿ ಅವರನ್ನು ಅಮಾನತು ಮಾಡಲಾಗಿದೆ.
ಪಿಡಿಒ ಶಿವಾನಂದ ಮರಿಕೇರಿ ಅವರು ಲಂಚ ಸ್ವೀಕರಿಸಿರುವುದನ್ನು ಒಪ್ಪಿಕೊಂಡು ತಪ್ಪಾಯ್ತು ಎಂದು ಕ್ಷಮೆ ಕೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎನ್. ಅನುರಾಧ ಅವರು ಪಿಡಿಒ ಶಿವಾನಂದ ಮರಿಕೇರಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.