HomeKarnataka108 ಆಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ; ಆರೋಗ್ಯ ಸಚಿವರು ಹೇಳಿದ್ದೇನು?

108 ಆಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ; ಆರೋಗ್ಯ ಸಚಿವರು ಹೇಳಿದ್ದೇನು?

ಬೆಳಗಾವಿ: 108 ಆಂಬುಲೆನ್ಸ್ ಚಾಲಕರ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆರೋಪದ ಬಗ್ಗೆ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರಕರಣದ ಬಗ್ಗೆ ವಿಚಾರಣೆ ನಡೆಸುವಂತೆ ಆಯುಕ್ತರಿಗೆ ಸೂಚನೆ ನೀಡುತ್ತೇನೆ. ವಿಚಾರಣೆ ಬಳಿಕ ಏನು ಕ್ರಮ ಕೈಗೊಳ್ಳಬೇಕೋ ತೆಗೆದುಕೊಳ್ಳುತ್ತೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿವಿಕೆ ಕಂಪನಿ ನಮಗೆ ಏಜೆನ್ಸಿ. 108 ಆಂಬುಲೆನ್ಸ್ ಗಳನ್ನು ಅವರೇ ನಿರ್ವಹಣೆ ಮಾಡುವುದು. ಸಾಕಷ್ಟು ಕುಂದುಕೊರತೆ, ಸಮಸ್ಯೆಗಳಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular