BIG NEWS : ‘ರಾಹುಲ್ ಗಾಂಧಿ’ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ಬಹುಮಾನ : ಶಿವಸೇನೆ ನಾಯಕನಿಂದ ವಿವಾದಾತ್ಮಕ ಹೇಳಿಕೆ |Video

ರಾಹುಲ್ ಗಾಂಧಿ ನಾಲಿಗೆ ಕತ್ತರಿಸುವವರಿಗೆ 11 ಲಕ್ಷ ಬಹುಮಾನ ನೀಡುತ್ತೇವೆ ಎಂದು ಶಿವಸೇನೆ ನಾಯಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಹಾರಾಷ್ಟ್ರದ ಶಿಂಧೆ ಬಣದ ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ಅವರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಗಾಯಕ್ವಾಡ್ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಸಂವಿಧಾನ ಅಪಾಯದಲ್ಲಿದೆ ಎಂದು ಹೇಳಿದ್ದರು. ಇಂತಹ ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಜನರ ಮತಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಇಂದು ಅವರು ಮೀಸಲಾತಿಯನ್ನು ರದ್ದುಗೊಳಿಸುವ ಬಗ್ಗೆ ಮಾತನಾಡುತ್ತಿದ್ದಾರೆ.

ಇಂದು ಅವರು ಹಿಂದುಳಿದ ಜನರು ಮತ್ತು ಬುಡಕಟ್ಟು ಜನಾಂಗದವರಿಗೆ ಮೀಸಲಾತಿಯನ್ನು ರದ್ದುಗೊಳಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಮೀಸಲಾತಿಯನ್ನು ರದ್ದುಗೊಳಿಸುವುದಾಗಿ ರಾಹುಲ್ ಆಡಿದ ಭಾಷೆಗೆ ಕಿಡಿಕಾರಿದ್ದಾರೆ. ರಾಹುಲ್ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂಪಾಯಿ ನೀಡುತ್ತೇನೆ. ಹಿಂದುಳಿದವರು, ಬುಡಕಟ್ಟು ಜನಾಂಗದವರು ಮತ್ತು ಇತರರಿಗೆ ಶೇಕಡಾ 100 ರಷ್ಟು ಮೀಸಲಾತಿಯನ್ನು ಕೊನೆಗೊಳಿಸಲು ರಾಹುಲ್ ಗಾಂಧಿ ಬಯಸಿದ್ದಾರೆ. ಈ ಮೂಲಕ ಕಾಂಗ್ರೆಸ್ ನ ನಿಜವಾದ ಮುಖ ಬಯಲಾಯಿತು ಎಂದಿದ್ದಾರೆ.

https://twitter.com/i/status/1835593172044661156

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read