Shocking: 11 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ವಿದ್ಯಾರ್ಥಿಗಳಿಂದ ಗ್ಯಾಂಗ್‌ ರೇಪ್

11 ವರ್ಷದ ಬಾಲಕಿಯ ಮೇಲೆ ನಾಲ್ವರು ಅಪ್ರಾಪ್ತ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರವೆಸಗಿರೋ‌ ಆಘಾತಕಾರಿ ಘಟನೆ ಚಂಡೀಗಢದಲ್ಲಿ ನಡೆದಿದೆ. ಸಂತ್ರಸ್ತೆ 7 ನೇ ತರಗತಿ ವಿದ್ಯಾರ್ಥಿನಿಯಾಗಿದ್ದು ಶಂಕಿತರಲ್ಲಿ ಒಬ್ಬ ಆಕೆಯ ಸಹಪಾಠಿ. ಉಳಿದ ಮೂವರು ಆರೋಪಿಗಳು ಸರ್ಕಾರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳು.

ಆರೋಪಿಗಳು ಕಳೆದ ಆರು ತಿಂಗಳಿನಿಂದ ಸಂತ್ರಸ್ತೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಘಟನೆ ಹದಿನೈದು ದಿನಗಳ ಹಿಂದೆ ನಡೆದಿದೆ ಎಂದು ಸಂತ್ರಸ್ತೆಯ ತಾಯಿ ಹೇಳಿದ್ದು, ನಾಲ್ವರು ಅಪ್ರಾಪ್ತರು ತನ್ನ ಮಗಳನ್ನು ಶಾಲೆಯ ಹೊರಗೆ ಪೊದೆಯಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಆರೋಪಿಸಿದ್ದಾರೆ.

ಅಪ್ರಾಪ್ತರು ಬಾಲಕಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಘಟನೆಯಿಂದ ಹುಡುಗಿ ಆಘಾತಕ್ಕೆ ಒಳಗಾಗಿದ್ದಳು. ಒಂದು ದಿನ ತನ್ನ ತಾಯಿಗೆ ಘಟನೆಯನ್ನು ಬಹಿರಂಗಪಡಿಸಿದ್ದಳು. ಸಂತ್ರಸ್ತೆಯ ತಾಯಿ ತರಗತಿ ಶಿಕ್ಷಕರನ್ನು ಭೇಟಿಯಾಗಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ್ದರು.

ಅದರಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ (ಪೋಕ್ಸೊ) ಮತ್ತು ಇತರ ಸೆಕ್ಷನ್‌ಗಳ ಅಡಿಯಲ್ಲಿ ಗುರುವಾರ ಪ್ರಕರಣ ದಾಖಲಿಸಲಾಗಿದೆ.

ನಾಲ್ವರು ಶಂಕಿತರನ್ನು ಬಂಧಿಸಲಾಗಿದ್ದು, ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read