ಆನೇಕಲ್: ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ನಡೆದಿದೆ.
ತನಿಷ್ಕಾ (11) ಮೃತ ಬಾಲಕಿ. ಬಾಲಕಿ ಮನೆಯ ಬಳಿ ಆಟವಾಡುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದಳು. ತಕ್ಷಣ ಅವಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲೇ ಆಕೆ ಸಾವನ್ನಪ್ಪಿದ್ದಳು.
ಮಗಳನ್ನು ಕಳೆದುಕೊಂಡಿರುವ ತಂದೆ-ತಾಯಿ ಆಕ್ರಂದನ ಮುಗಿಲು ಮುಟ್ಟಿದೆ. ಮಗಳ ಸಾವಿಗೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಕಣ್ಣೀರಿಟ್ಟಿದ್ದಾರೆ. ಸೂರ್ಯನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 
			 
		 
		 
		 
		 Loading ...
 Loading ... 
		 
		 
		