HomeKarnatakaBig News: ರೆಸಾರ್ಟ್ ರಾಜಕೀಯ, ಡಿಕೆ ಶಿವಕುಮಾರ್ ಸೂಚನೆಯಂತೆ 12 ಶಾಸಕರು ರೆಸಾರ್ಟ್‌ಗೆ!

Big News: ರೆಸಾರ್ಟ್ ರಾಜಕೀಯ, ಡಿಕೆ ಶಿವಕುಮಾರ್ ಸೂಚನೆಯಂತೆ 12 ಶಾಸಕರು ರೆಸಾರ್ಟ್‌ಗೆ!

ಕರ್ನಾಟಕದ ಉಪಮುಖ್ಯಮಂತ್ರಿ, ಅಸ್ಸಾಂ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಉಸ್ತುವಾರಿ ಡಿ.ಕೆ.ಶಿವಕುಮಾರ್ ರೆಸಾರ್ಟ್ ರಾಜಕೀಯ ಆರಂಭಿಸಿದ್ದಾರೆ. 12 ಶಾಸಕರು ಬೆಂಗಳೂರು ನಗರದ ಹೊರವಲಯದ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ.

126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಗೆ ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗುವ ನಿರೀಕ್ಷೆ ಇದೆ. ಚುನಾವಣೆ ಸಮಯದಲ್ಲಿ ಆಪರೇಷನ್ ಕಮಲ ನಡೆಯುವ ನಿರೀಕ್ಷೆ ಹಿನ್ನಲೆಯಲ್ಲಿ ಅಸ್ಸಾಂನ 12 ಶಾಸಕರನ್ನು ಬೆಂಗಳೂರಿಗೆ ಕರೆಸಿಕೊಳ್ಳಲಾಗಿದೆ.

ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಕೆಲವು ದಿನಗಳ ಹಿಂದೆ ಬಿಜೆಪಿ ಸೇರಿದ್ದರು. ಅಸ್ಸಾಂ ಕಾಂಗ್ರೆಸ್‌ನ ಹಾಲಿ ಅಧ್ಯಕ್ಷ ಗೌರವ್ ಗೊಗೊಯ್ ಡಿ.ಕೆ.ಶಿವಕುಮಾರ್ ಜೊತೆ ಮಾತನಾಡಿ, ಆಪರೇಷನ್ ಕಮಲವಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿ.ಕೆ.ಶಿವಕುಮಾರ್ ಸೂಚನೆ: ಅಸ್ಸಾಂ ಕಾಂಗ್ರೆಸ್ ಶಾಸಕರನ್ನು ಉಳಿಸಿಕೊಳ್ಳಲು ಡಿ.ಕೆ.ಶಿವಕುಮಾರ್ ಸೂಚನೆಯಂತೆ 12 ಶಾಸಕರನ್ನು ರೆಸಾರ್ಟ್‌ಗೆ ಕಳಿಸಲಾಗಿದೆ. ಗುರುವಾರ ರಾತ್ರಿ ಎಲ್ಲರೂ ಬೆಂಗಳೂರು ನಗರಕ್ಕೆ ಆಗಮಿಸಿದ್ದು, ವಿಮಾನ ನಿಲ್ದಾಣದಿಂದ ರೆಸಾರ್ಟ್‌ಗೆ ಕಳಿಸಲಾಗಿದೆ.

ಅಸ್ಸಾಂ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ 42 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಣೆ ಮಾಡಿದೆ. ಮಾರ್ಚ್ 16ರಂದು ಚುನಾವಣಾ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ.

ರಾಜ್ಯದಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ಸರ್ಕಾರ ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಶಾಸಕರನ್ನು ಸೆಳೆಯುವ ಸೂಚನೆ ಸಿಕ್ಕಿರುವ ಹಿನ್ನಲೆಯಲ್ಲಿ ರೆಸಾರ್ಟ್ ರಾಜಕೀಯ ಆರಂಭಿಸಲಾಗಿದೆ.

ಈ ಹಿಂದೆ ಪಕ್ಷದ ಹೈಕಮಾಂಡ್ ಸೂಚನೆಯಂತೆ ಗುಜರಾತ್, ಮಹಾರಾಷ್ಟ್ರ, ಮಧ್ಯ ಪ್ರದೇಶ ರಾಜ್ಯದ ಶಾಸಕರನ್ನು ಕರ್ನಾಟಕದ ರೆಸಾರ್ಟ್‌ಗಳಿಗೆ ಕರೆತಂದು ಡಿ.ಕೆ.ಶಿವಕುಮಾರ್ ರಕ್ಷಣೆ ಮಾಡಿದ್ದರು.

ಈಗ ಪುನಃ ಅದೇ ಕಾರ್ಯತಂತ್ರದ ಮೊರೆ ಹೋಗಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿ ಇರುವ ಕಾರಣ ಶಾಸಕರನ್ನು ರಕ್ಷಣೆ ಮಾಡುವುದು ಸುಲಭ. ಆದ್ದರಿಂದ ಅಸ್ಸಾಂನ ಶಾಸಕರು ಬೆಂಗಳೂರು ಹೊರವಲಯದ ರೆಸಾರ್ಟ್‌ಗೆ ಆಗಮಿಸಿದ್ದಾರೆ.

ಕಾಂಗ್ರೆಸ್ ಅಸ್ಸಾಂ ವಿಧಾನಸಭೆ ಚುನಾವಣೆ ತಯಾರಿ ಜೋರಾಗಿ ನಡೆಸುತ್ತಿದೆ. ಸಿಎಂ ಹಿಮಂತ ಬಿಸ್ವಾಸ್ ಶರ್ಮಾ ಮತ್ತು ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿಕೊಂಡು 20 ಅಂಶಗಳ ಚಾರ್ಜ್‌ಶೀಟ್ ಸಿದ್ಧಪಡಿಸಲಾಗಿತ್ತು. ಇದರ 10 ಲಕ್ಷ ಪ್ರತಿಗಳನ್ನು ಸಾಗಿಸುತ್ತಿದ್ದಾಗ ಗುವಾಹಟಿಯಲ್ಲಿ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಸಿಎಂ ಹಿಮಂತ ಬಿಸ್ವಾಸ್ ಶರ್ಮಾ ಮತ್ತು ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿಕೊಂಡು 20 ಅಂಶಗಳ ಚಾರ್ಜ್‌ಶೀಟ್ ಸಿದ್ಧಪಡಿಸಲಾಗಿದೆ. ಫೆಬ್ರವರಿ 19ರಂದು ಗುವಾಹಟಿಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇತರರು ಚಾರ್ಜ್‌ಶೀಟ್ ಬಿಡುಗಡೆ ಮಾಡಿದ್ದರು.

ವಿಧಾನಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ಇದನ್ನು ವಿತರಣೆ ಮಾಡಲು ಕಾಂಗ್ರೆಸ್ ತಂತ್ರ ರೂಪಿಸಿತ್ತು. ಈ ಚಾರ್ಜ್‌ಶೀಟ್ ಆಡಳಿತ ಪಕ್ಷದ ಭ್ರಷ್ಟಾಚಾರ ಮತ್ತು ಚುನಾವಣಾ ಪೂರ್ವ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿರುವುದು, ಸಿಎಂ ಶರ್ಮಾ ತಮ್ಮ ಕುಟುಂಬ ಸದಸ್ಯರ ಹೆಸರಿನಲ್ಲಿ 12,000 ಬಿಘಾ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.

ರಾಜ್ಯದಲ್ಲಿಯೇ ಇದ್ದರೆ ಕಾಂಗ್ರೆಸ್ ಶಾಸಕರ ರಕ್ಷಣೆ ಕಷ್ಟವಾಗಲಿದೆ. ಅವರನ್ನು ಬಿಜೆಪಿ ಸೆಳೆಯಬಹುದು ಎಂಬ ಕಾರಣಕ್ಕೆ ರೆಸಾರ್ಟ್‌ಗೆ ಆಗಮಿಸುವಂತೆ ಸೂಚನೆ ನೀಡಲಾಗಿತ್ತು. ಡಿ.ಕೆ.ಶಿವಕುಮಾರ್ ಸೂಚನೆಯಂತೆ ಶಾಸಕರು ಬೆಂಗಳೂರು ನಗರಕ್ಕೆ ಆಗಮಿಸಿದ್ದಾರೆ. ಆದರೆ ಎಷ್ಟು ದಿನ ವಾಸ್ತವ್ಯ ಹೂಡಲಿದ್ದಾರೆ? ಎಂಬ ಬಗ್ಗೆ ಇನ್ನೂ ಮಾಹಿತಿ ಇಲ್ಲ.

2021ರ ವಿಧಾನಸಭೆ ಚುನಾವಣೆಯಲ್ಲಿ ಅಸ್ಸಾಂ ರಾಜ್ಯದಲ್ಲಿ ಬಿಜೆಪಿ 60, ಕಾಂಗ್ರೆಸ್ 20, ಎಐಯುಡಿಎಫ್ 16, ಎಜಿಪಿ 9 ಸೀಟುಗಳಲ್ಲಿ ಜಯಗಳಿಸಿದ್ದವು. ಬಿಜೆಪಿ ಎನ್‌ಡಿಎ ಮೈತ್ರಿಕೂಟದ ಇತರ ಪಕ್ಷಗಳ ಜೊತೆ ಸೇರಿ ಸರ್ಕಾರ ರಚನೆ ಮಾಡಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular