HomeKarnatakaಫಾಸ್ಟ್ ಫುಡ್ ತಯಾರಿಕೆ ತರಬೇತಿ; ಸ್ವಂತ ಉದ್ಯಮ ಆರಂಭಿಸಲು ಸಹಾಯ

ಫಾಸ್ಟ್ ಫುಡ್ ತಯಾರಿಕೆ ತರಬೇತಿ; ಸ್ವಂತ ಉದ್ಯಮ ಆರಂಭಿಸಲು ಸಹಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ ಫಾಸ್ಟ್‌ಫುಡ್ (ಚಾಟ್ಸ್) ತಯಾರಿಕೆ ತರಬೇತಿ ನೀಡಲಾಗುತ್ತದೆ.

12 ದಿನಗಳ ಅವಧಿಯ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು ಏಪ್ರಿಲ್ 4 ರಿಂದ ಪ್ರಾರಂಭಿಸಲಾಗುತ್ತಿದೆ. ಈ ಶಿಬಿರದಲ್ಲಿ ಪಾನಿ ಪೂರಿ, ಬೇಲ್ ಪೂರಿ, ದಹಿ ಪೂರಿ, ಸೇವ್ ಪೂರಿ, ಚಾಟ್ ಮಸಾಲ, ಕಚೋರಿ, ಗೋಬಿ ಮಂಚೂರಿ, ಫ್ರೈಡ್ ರೈಸ್, ಸಮೋಸ ಇನ್ನಿತರೆ ಚಾಟ್ಸ್‌ಗಳ ತಯಾರಿಕೆಯ ಬಗ್ಗೆ ತರಬೇತಿ ನೀಡಲಾಗುವುದು.

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 49 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.

ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತಿಯುಳ್ಳ ಶಿಬಿರಾರ್ಥಿಗಳು ಮಾರ್ಚ್ 27ರ ಬೆಳಗ್ಗೆ 9.30 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ಹಾಜರಾಗಬಹುದು.

ತರಬೇತಿಗೆ ಬರುವಾಗ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ಮಾರ್ಚ್ 27ರೊಳಗೆ ಸಂಸ್ಥೆಯನ್ನು ದೂರವಾಣಿ ಸಂಖ್ಯೆ 8970476050, 9591514754, 6363139123, 9686248369, 9505894247 ಸಂಖ್ಯೆ ಮೂಲಕ ಸಂಪರ್ಕಿಸಬಹುದು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular