ಕ್ರೀಡಾಕೂಟದ ವೇಳೆ ಕಿಕ್ಕಿರಿದ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 12 ಮಂದಿ ಸಾವು, 80ಕ್ಕೂ ಅಧಿಕ ಜನರಿಗೆ ಗಾಯ

ಅಂಟಾನಾನರಿವೊ: ಮಡಗಾಸ್ಕರ್ ರಾಜಧಾನಿ ಅಂಟಾನಾನರಿವೊದ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಜನಸಂದಣಿ ಕಾಲ್ತುಳಿತದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಧಾನ ಮಂತ್ರಿ ಕ್ರಿಶ್ಚಿಯನ್ ಎನ್ಟ್ಸೆ ಹೇಳಿದ್ದಾರೆ.

ಅಂಟಾನಾನರಿವೊ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದು, 80 ಜನರು ಗಾಯಗೊಂಡರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

11 ನೇ ಹಿಂದೂ ಮಹಾಸಾಗರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಮೊದಲು ಮಡಗಾಸ್ಕನ್ ರಾಜಧಾನಿಯ ಬರಿಯಾ ಕ್ರೀಡಾಂಗಣದ ಪ್ರವೇಶದ್ವಾರದಲ್ಲಿ ಕಾಲ್ತುಳಿತ ಸಂಭವಿಸಿದೆ.

ಅಂಟಾನಾನರಿವೊ ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ರಾಷ್ಟ್ರದ ಪ್ರಧಾನ ಮಂತ್ರಿ ಕ್ರಿಶ್ಚಿಯನ್ ಎನ್ಟ್ಸೆ, ತಾತ್ಕಾಲಿಕ ಟೋಲ್ ಬಳಿ 12 ಮಂದಿ ಕಾಲ್ತುಳಿತದಲ್ಲಿ ಮೃತಪಟ್ಟಿದ್ದಾರೆ. ಸುಮಾರು 50,000 ಪ್ರೇಕ್ಷಕರು ಹಿಂದೂ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಸೇರಿದ್ದರು ಎಂದು ತಿಳಿಸಿದ್ದಾರೆ.

ಪ್ರಸ್ತುತ 12 ರಷ್ಟಿರುವ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ರೆಡ್‌ಕ್ರಾಸ್ ಹೇಳಿದೆ. ಕಾಲ್ತುಳಿತಕ್ಕೆ ಕಾರಣ ಸದ್ಯಕ್ಕೆ ಸ್ಪಷ್ಟವಾಗಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read