HomeKarnatakaವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ 12 ಅಕ್ರಮ ಬಾಂಗ್ಲಾ ಪ್ರಜೆಗಳು ವಶಕ್ಕೆ

ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ 12 ಅಕ್ರಮ ಬಾಂಗ್ಲಾ ಪ್ರಜೆಗಳು ವಶಕ್ಕೆ

ಬೆಂಗಳೂರು: ಪಶ್ಚಿಮ ಬಂಗಾಳ ಮೂಲಕ ಭಾರತಕ್ಕೆ ಬಂದು ಅಕ್ರಮವಾಗಿ ನೆಲೆಸಿದ್ದಲ್ಲದೆ ಮಾನವ ಕಳ್ಳ ಸಾಗಣೆ, ವೇಶ್ಯಾವಾಟಿಕೆ ಸೇರಿದಂತೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ 12 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಾಂಗ್ಲಾದೇಶ ಮೂಲದ ಮನ್ಸೂರ್ ಅಲಿ(29), ಮುಕುಲ್(32) ಎಂಬುವರನ್ನು ಬಂಧಿಸಲಾಗಿದೆ. ಇತರೆ 10 ಮಂದಿ ಮಹಿಳೆಯರನ್ನು ವಶಕ್ಕೆ ಪಡೆದು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ಬಾಣಸವಾಡಿ ಮತ್ತು ಹೆಣ್ಣೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಾನವ ಕಳ್ಳ ಸಾಗಣೆ ಮೂಲಕ ಕೆಲವು ಮಹಿಳೆಯರನ್ನು ಬಾಂಗ್ಲಾದೇಶದಿಂದ ಕರೆಸಿಕೊಂಡು ವೇಶ್ಯಾವಾಟಿಕೆ ದಂದೆಗೆ ದೂಡಿರುವ ಮಾಹಿತಿ ಆಧರಿಸಿ ಸಿಸಿಬಿಯ ಮಹಿಳಾ ರಕ್ಷಣಾ ವಿಭಾಗದ ಎಸಿಪಿ ಧರ್ಮೇಂದ್ರ ಮತ್ತು ತಂಡ ಕಾರ್ಯಾಚರಣೆ ನಡೆಸಿದೆ.

ಆರೋಪಿಗಳ ಮನೆ ಮೇಲೆ ಕೆಲವು ದಿನಗಳ ಹಿಂದೆ ದಾಳಿ ನಡೆಸಿದ್ದು, ಮಹಿಳೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿತ್ತು. ಬಂಧಿತ ಇಬ್ಬರು ಆರೋಪಿಗಳು ಮತ್ತು ರಕ್ಷಿಸಲಾದ ಮಹಿಳೆಯರ ಬಳಿ ಬಾಂಗ್ಲಾದೇಶದ ಗುರುತಿನ ಚೀಟಿಗಳು ಇತರೆ ದಾಖಲೆಗಳು ಪತ್ತೆಯಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಡಿ ಭಾಗದಲ್ಲಿ ಮಧ್ಯವರ್ತಿಗಳಿಗೆ ಹಣ ಕೊಟ್ಟು ಮಹಿಳೆಯರನ್ನು ಭಾರತಕ್ಕೆ ಕರೆಸಿಕೊಳ್ಳಲಾಗಿದೆ. ಒಂದು ತಿಂಗಳಿನಿಂದ ಬೆಂಗಳೂರಿನಲ್ಲಿ ಇವರು ವಾಸವಾಗಿದ್ದರು ಎನ್ನಲಾಗಿದೆ. ಜಾಲತಾಣಗಳ ಮೂಲಕ ಮಹಿಳೆಯರ ಫೋಟೋ ಹಾಕಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಪರಿಚಯಸ್ಥರ ಮೂಲಕ ಗ್ರಾಹಕರನ್ನು ಸಂಪರ್ಕಿಸುತ್ತಿದ್ದರು ಎಂಬುದು ಪತ್ತೆಯಾಗಿದೆ. 12 ಮಂದಿ ಬಾಂಗ್ಲಾದೇಶ ಪ್ರಜೆಗಳನ್ನು ವಿದೇಶಿ ಪ್ರಾದೇಶಿಕ ನೊಂದಣಿ ಅಧಿಕಾರಿಗಳಿಗೆ ಒಪ್ಪಿಸಲಾಗಿದ್ದು, ಹೆಣ್ಣೂರು ಮತ್ತು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular