ಬಾಗಲಕೋಟೆ: ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 12 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.
ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ಘಟನೆ ನಡೆದಿದೆ. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯುಟ ಸೇವಿಸಿದ ನಂತರ ಮಕ್ಕಳಿಗೆ ವಾಂತಿ ಭೇದಿಯಾಗಿತ್ತು. ಮುಧೋಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಒಂಬತ್ತು ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ತೀವ್ರ ಅಸ್ವಸ್ಥರಾದ ಮೂವರು ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಅಧಿಕಾರಿಗಳು ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ.

