ಶುಭ ಸುದ್ದಿ: 1,365 IAS, 703 IPS ಖಾಲಿ ಹುದ್ದೆಗಳ ಭರ್ತಿ; ಸರ್ಕಾರದ ಮಾಹಿತಿ

ನವದೆಹಲಿ: ಭಾರತೀಯ ಆಡಳಿತ ಸೇವೆಯಲ್ಲಿ(ಐಎಎಸ್) 1,365 ಮತ್ತು ಭಾರತೀಯ ಪೊಲೀಸ್ ಸೇವೆಯಲ್ಲಿ(ಐಪಿಎಸ್) 703 ಹುದ್ದೆಗಳು ಖಾಲಿ ಇವೆ ಎಂದು ಗುರುವಾರ ರಾಜ್ಯಸಭೆಗೆ ತಿಳಿಸಲಾಗಿದೆ

IAS, IPS, IFS ಮತ್ತು IRS ಸೇರಿದಂತೆ ನಾಗರಿಕ ಸೇವೆಗಳಲ್ಲಿ ನೇರ ನೇಮಕಾತಿ ಆಧಾರದ ಮೇಲೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪ್ರತಿ ವರ್ಷ, ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್(UPSC) ನಾಗರಿಕ ಸೇವಾ ಪರೀಕ್ಷೆಗಳನ್ನು(CSE) ನಡೆಸುತ್ತದೆ.

ಇವುಗಳಲ್ಲದೆ, ಭಾರತೀಯ ಅರಣ್ಯ ಸೇವೆಯಲ್ಲಿ(ಐಎಫ್‌ಎಸ್) 1,042 ಮತ್ತು ಭಾರತೀಯ ಕಂದಾಯ ಸೇವೆಯಲ್ಲಿ(ಐಆರ್‌ಎಸ್) 301 ಖಾಲಿ ಇವೆ ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಖಾಲಿ ಹುದ್ದೆಗಳ ಸಂಭವ ಮತ್ತು ಭರ್ತಿ ನಿರಂತರ ಪ್ರಕ್ರಿಯೆಯಾಗಿದೆ. ಖಾಲಿ ಇರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡುವುದು ಕೇಂದ್ರ ಸರ್ಕಾರದ ಪ್ರಯತ್ನವಾಗಿದೆ ಎಂದು ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read