ಬೆಂಗಳೂರು : ಸೈಟ್ ಕೊಡಿಸುವುದಾಗಿ 139 ಕಿರುತೆರೆ ಕಲಾವಿದರಿಗೆ ವಂಚನೆ ಎಸಗಿದ ಆರೋಪದ ಮೇರೆಗೆ ಬಿಲ್ಡರ್ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ಬೆಂಗಳೂರಿನ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬಿಲ್ಡರ್ ಭಗೀರಥ, ಸಂಜೀವ್ ತಗಡೂರು, ಗುರುಪ್ರಸಾದ್, ರವೀಂದ್ರ, ಉಮಾಕಾಂತ್ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸದಸ್ಯರಿಗೆ ವಂಚನೆ ಎಸಗಲಾಗಿದೆ. ಬರೋಬ್ಬರಿ 1.6 ಕೋಟಿ ಹಣ ಪಡೆದು ವಂಚಿಸಲಾಗಿದೆ ಎಂದು ದೂರು ನೀಡಲಾಗಿದೆ.
ಕೆಟಿವಿಎ ನಲ್ಲಿ ಸೈಟ್ ಕಮಿಟಿ ಸದಸ್ಯ ಆಗಿದ್ದ ಸಂಜೀವ್ ತಗಡೂರು 2015 ರಲ್ಲಿ ಸೈಟಗ ಕೊಡಿಸುವುದಾಗಿ ಬಿಲ್ಡರ್ ಜೊತೆ ವ್ಯವಹಾರ ಮಾಡಿದ್ದರು. ಇದೀಗ ಹಣ ಪಡೆದು ಸೈಟ್ ನೀಡದೇ ವಂಚನೆ ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಬೆಂಗಳೂರಿನ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಭಾವನ ಬೆಳಗೆರೆ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಸೈಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ ಎಸಗಿರುವ ಆರೋಪ ಕೇಳಿಬಂದಿದೆ.
TAGGED:ಸೈಟ್