ಗಮನಿಸಿ: ಗುಣಮಟ್ಟವನ್ನೇ ಹೊಂದಿಲ್ಲ 1394 ಔಷಧಗಳು: ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: 1394 ಔಷಧಗಳು ಪ್ರಮಾಣಿತ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಮಂಗಳವಾರ ರಾಜ್ಯಸಭೆಗೆ ಕೇಂದ್ರ ಆರೋಗ್ಯ ಖಾತೆಯ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಲಿಖಿತ ಉತ್ತರ ನೀಡಿದ್ದು, 2023- 24 ರಲ್ಲಿ 1394 ಔಷಧಗಳು ಪ್ರಮಾಣಿತ ಗುಣಮಟ್ಟ ಪರೀಕ್ಷೆಯಲ್ಲಿ ವೈಫಲ್ಯ ಕಂಡಿವೆ. 2019 -20ರಲ್ಲಿ 950, 2022-23 ರಲ್ಲಿ 1171 ಔಷಧಗಳು ಪ್ರಮಾಣಿತ ಗುಣಮಟ್ಟ ಹೊಂದಿಲ್ಲ ಎಂದು ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಘಟನೆ ವರದಿ ನೀಡಿದೆ ಎಂದು ತಿಳಿಸಿದ್ದಾರೆ.

ನಕಲಿ ಹಾಗೂ ಕಲಬರಕೆ ಔಷಧ ಮಾದರಿ ತಯಾರಿಸಿದ ಕಂಪನಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. 2023- 24 ರಲ್ಲಿ ಒಟ್ಟು 1.06 ಲಕ್ಷ ಔಷಧ ಮಾದರಿಗಳನ್ನು ಪರೀಕ್ಷೆಗೆ ಸ್ವೀಕರಿಸಲಾಗಿದ್ದು, ಇವುಗಳಲ್ಲಿ 2988 ಮಾದರಿ ಪ್ರಮಾಣಿತ ಗುಣಮಟ್ಟ ಹೊಂದಿಲ್ಲ. 282 ಮಾದರಿಗಳು ನಕಲಿಯಾಗಿರುವುದು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read