HomeIndiaಅಪಾರ್ಟ್ ಮೆಂಟ್ ಗೆ ಬೆಂಕಿ ತಗುಲಿ ಘೋರ ದುರಂತ: 14 ಜನ ಸಾವು

ಅಪಾರ್ಟ್ ಮೆಂಟ್ ಗೆ ಬೆಂಕಿ ತಗುಲಿ ಘೋರ ದುರಂತ: 14 ಜನ ಸಾವು

ಜಾರ್ಖಂಡ್‌ ನ ಧನ್‌ ಬಾದ್‌ ನಲ್ಲಿ ಕಟ್ಟಡಕ್ಕೆ ಬೆಂಕಿ ತಗುಲಿ 14 ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ಜಾರ್ಖಂಡ್‌ನ ಧನ್‌ ಬಾದ್‌ ನಲ್ಲಿ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು 14 ಜನರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ.

ಧನ್‌ಬಾದ್‌ನ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಹಲವಾರು ಜನ ಸಿಕ್ಕಿಬಿದ್ದಿರುವ ಶಂಕೆ ಇದೆ. ಕೆಲವು ಸಾವುಗಳೂ ವರದಿಯಾಗಿವೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ನಿಖರ ಸಂಖ್ಯೆಯನ್ನು ಪರಿಶೀಲಿಸಲು ಸಾಧ್ಯವಿಲ್ಲ ಎಂದು ಧನ್‌ ಬಾದ್‌ ನ ಕಾನೂನು ಮತ್ತು ಸುವ್ಯವಸ್ಥೆಯ ಡಿಎಸ್‌ಪಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಟ್ಟಡದ ಆರನೇ ಮತ್ತು ಏಳನೇ ಮಹಡಿಯಲ್ಲಿ ಸಿಲುಕಿರುವ ನಿವಾಸಿಗಳನ್ನು ರಕ್ಷಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಇದು ಅತ್ಯಂತ ಹೃದಯ ವಿದ್ರಾವಕ ಘಟನೆ ಎಂದು ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೇಳಿದ್ದಾರೆ. ಜಿಲ್ಲಾಡಳಿತ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಗಾಯಗೊಂಡ ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸೋರೆನ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular