ಬಹುಮಹಡಿ ಕಟ್ಟಡದಲ್ಲಿ ಭಾರಿ ಸ್ಪೋಟ: 14 ಮಂದಿ ಸಾವು, 100 ಜನರಿಗೆ ಗಾಯ; ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ಘೋರ ದುರಂತ

ಢಾಕಾ: ಬಾಂಗ್ಲಾದೇಶದ ಢಾಕಾದ ಗುಲಿಸ್ತಾನ್ ಪ್ರದೇಶದಲ್ಲಿ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದು, ಸುಮಾರು 100 ಜನ ಗಾಯಗೊಂಡಿದ್ದಾರೆ.

ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 11 ಅಗ್ನಿಶಾಮಕ ಸೇವೆಗಳ ತುರ್ತು ಘಟಕಗಳು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಗೊಂಡವರನ್ನು ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ.

ಜನನಿಬಿಡ ಸಿದ್ದಿಕ್ ಬಜಾರ್‌ನಲ್ಲಿರುವ ಈ ಕಟ್ಟಡವು ಹಲವಾರು ಕಚೇರಿಗಳು ಮತ್ತು ಮಳಿಗೆಗಳನ್ನು ಹೊಂದಿರುವ ವಾಣಿಜ್ಯ ಕಟ್ಟಡವಾಗಿದೆ. ಏಳು ಅಂತಸ್ತಿನ ಕಟ್ಟಡದ ನೆಲ ಮಹಡಿಯಲ್ಲಿ ನೈರ್ಮಲ್ಯ ಸಾಮಗ್ರಿಗಳನ್ನು ಮಾರಾಟ ಮಾಡುವ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read