SHOCKING NEWS: ರಿಲೇ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನದಲ್ಲಿ ಗೆದ್ದ ಬಾಲಕ; ಕೆಲ ನಿಮಿಷದಲ್ಲೇ ಹೃದಯಾಘಾತದಿಂದ ಸಾವು

ತುಮಕೂರು: ಶಾಲಾ ಮಟ್ಟದ ಕ್ರಿಡಾಕೂಟದಲ್ಲಿ ಭಾಗವಹಿಸಿದ್ದ ಬಾಲಕ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕತೋಟುಕೆರೆ ಗ್ರಾಮದಲ್ಲಿ ನಡೆದಿದೆ.

ಬೆಳದಾರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ 15 ವರ್ಷದ ಭೀಮಾಶಂಕರ್ ಮೃತ ಬಾಲಕ. ವಿದ್ಯಾರ್ಥಿ 4 X 100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಭಾಗವಹಿಸಿದ್ದ. ದ್ವಿತೀಯ ಸ್ಥಾನದಲ್ಲಿ ಗೆದ್ದಿದ್ದ. ಮೊದಲ ಸ್ಥಾನದಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ ಎಂದು ಅಸಮಾಧಾನಗೊಂಡಿದ್ದ.

ಕ್ರೀಡಾಕೂಟ ಮುಗಿದ ಬಳಿಕ ಶಿಕ್ಷಕರು ವಾಪಸ್ ಗ್ರಾಮಕ್ಕೆ ತೆರಳಲು ವಾಹನ ಹತ್ತುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದ್ದಾರೆ. ಈ ವೇಳೆ ಏಕಾಏಕಿ ಕುಸಿದು ಬಿದ್ದ ವಿದ್ಯಾರ್ಥಿ ಭೀಮಾಶಂಕರ್ ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲಿ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದ. ಹೃದಯ ಸ್ತಂಭನದಿಂದ ವಿದ್ಯಾರ್ಥಿ ಮೃತಪಟ್ಟಿದ್ದಾಗಿ ವೈದ್ಯರು ಹೇಳಿದ್ದಾರೆ ಎಂದು ಶಾಲಾ ಶಿಕ್ಷಕರು ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read