HomeAgricultureBIG NEWS: ಇತಿಹಾಸದಲ್ಲೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‌ಗೆ ವಿಶೇಷ ಅತಿಥಿಗಳಾಗಿ 1,500 ರೈತ ದಂಪತಿಗಳಿಗೆ...

BIG NEWS: ಇತಿಹಾಸದಲ್ಲೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‌ಗೆ ವಿಶೇಷ ಅತಿಥಿಗಳಾಗಿ 1,500 ರೈತ ದಂಪತಿಗಳಿಗೆ ಆಹ್ವಾನ

ನವದೆಹಲಿ: ಮೊದಲ ಬಾರಿಗೆ ರಾಷ್ಟ್ರ ರಾಜಧಾನಿಯಲ್ಲಿ ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ಗೆ ಸುಮಾರು 1,500 ರೈತರು ಮತ್ತು ಅವರ ಸಂಗಾತಿಗಳನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ.

ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‌ಗೆ ವಿಶೇಷ ಅತಿಥಿಗಳಾಗಿ ರೈತರನ್ನು ಆಹ್ವಾನಿಸಲಾಗಿದೆ. ದೇಶಾದ್ಯಂತ ಸುಮಾರು 1,500 ರೈತರು ಮತ್ತು ಅವರ ಸಂಗಾತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಕೃಷಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈತ ಉತ್ಪಾದಕರ ಸಂಸ್ಥೆಗಳ(ಎಫ್‌ಪಿಒ) ರೈತ ಪ್ರತಿನಿಧಿಗಳು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಮತ್ತು ಸೂಕ್ಷ್ಮ ನೀರಾವರಿ ಯೋಜನೆಗಳ ಫಲಾನುಭವಿಗಳನ್ನು ಆಹ್ವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪರೇಡ್ ನಂತರ ಕೃಷಿ ಸಚಿವ ಅರ್ಜುನ್ ಮುಂಡಾ ರೈತರಿಗೆ ಊಟದ ವ್ಯವಸ್ಥೆ ಮಾಡಲಿದ್ದಾರೆ. ಕಳೆದ ವರ್ಷದ ಸ್ವಾತಂತ್ರ್ಯ ದಿನಾಚರಣೆ ವೇಳೆ ಸುಮಾರು 500 ರೈತರನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular