ಶೀಘ್ರವೇ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುದಿನ ಸಾಲಿನಲ್ಲಿ 15,000 ಕಲಾ, ಸಂಗೀತ ಮತ್ತು ಮತ್ತಿತರ ಶಿಕ್ಷಕರನ್ನು ನೇಮಿಸಿಕೊಳ್ಳಲು ಉದ್ದೇಶಿಸಿಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ಈಗಾಗಲೇ 13,000 ಶಿಕ್ಷಕರ ನೇಮಕಕ್ಕೆ  ಕ್ರಮ ಕೈಗೊಳ್ಳಲಾಗಿದೆ. ಉಳಿದ 4,000 ಶಿಕ್ಷಕರ ನೇಮಕ ಪ್ರಕ್ರಿಯೆಯನ್ನು ಅಕ್ಟೋಬರ್ 30 ರಂದು ನ್ಯಾಯಾಲಯದ ಆದೇಶದ ನಂತರ ಕ್ರಮ ವಹಿಸಲಾಗುವುದು. ಮುಂದಿನ ಸಾಲಿನಲ್ಲಿ 15,000 ಕಲಾ ಮತ್ತು ಸಂಗೀತ ಮತ್ತಿತರ ಶಿಕ್ಷಕರನ್ನು ನೇಮಿಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 9 ಸಾವಿರ ಶಿಕ್ಷಕರ ನೇಮಕ ಮಾಡಿಕೊಂಡಿದ್ದು, ಇನ್ನೂ 4 ಸಾವಿರ ಶಿಕ್ಷಕರ ನೇಮಕಾತಿ ಆಗಬೇಕಿದೆ. ಕೆಲವರು ನೇಮಕಾತಿಗೆ ಸಂಬಂಧಿಸಿದಂತೆ ಕೋರ್ಟ್ ಗೆ ಹೋಗಿರುವುದರಿಂದ ಅಕ್ಟೋಬರ್ 30 ರಂದು ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಕೋರ್ಟ್ ನಲ್ಲಿ ಪ್ರಕರಣ ಇತ್ಯರ್ಥವಾದರೆ 4000 ಶಿಕ್ಷಕರ ನೇಮಕ ಆಗಲಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read