ಫೆ. 29 ರಿಂದ ಮಾ. 7 ರವರೆಗೆ ‘ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ’

ಬೆಂಗಳೂರು: ಫೆಬ್ರವರಿ 29 ರಿಂದ 15ನೇ ಆವೃತ್ತಿಯ ಬೆಂಗಳೂರು ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ನಡೆಯಲಿದೆ. ಮಾರ್ಚ್ 7ರವರೆಗೆ ನಡೆಯಲಿರುವ ಚಲನಚಿತ್ರೋತ್ಸವಕ್ಕೆ ಫೆಬ್ರವರಿ 29ರಂದು ವಿಧಾನಸೌಧ ಮುಂಭಾಗ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುವರು.

ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸಂಘಟನಾ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿದ ಸಿಎಂ ಈ ಬಗ್ಗೆ ಮಾಹಿತಿ ನೀಡಿ, ಫೆಬ್ರವರಿ 29 ರಿಂದ 8 ದಿನಗಳ ಕಾಲ 15ನೇ ಅಂತರ ರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ ಎಂದು ತಿಳಿಸಿದ್ದಾರೆ.

ಚಲನ ಚಿತ್ರೋತ್ಸವದಲ್ಲಿ ವಿದೇಶಗಳಲ್ಲಿ ಮನ್ನಣೆ ಪಡೆದ ಚಿತ್ರಗಳ ಜೊತೆಗೆ ಕನ್ನಡ ಸೇರಿದಂತೆ ದೇಶದ ವಿವಿಧ ಭಾಷೆಯ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ಮಾರ್ಚ್ 7ರಂದು ಸಮಾರೋಪ ಸಮಾರಂಭ ನಡೆಯಲಿದೆ. ರಾಜ್ಯಪಾಲರು ವಿವಿಧ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಚಲನಚಿತ್ರೋತ್ಸವಕ್ಕಾಗಿ ಸಂಘಟನಾ ಸಮಿತಿಯೊಂದಿಗೆ ಕೋರ್ ಕಮಿಟಿಯನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read