ಬೆಂಗಳೂರು : ನೇಣು ಬಿಗಿದುಕೊಂಡು 16 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಕುಸುಮಾ (16) ಎಂದು ಗುರುತಿಸಲಾಗಿದೆ. ಮನೆಯಲ್ಲೇ ಈಕೆ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾಳೆ.
ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕುಸುಮಾ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದರು.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.