HomeIndiaಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಮತ್ತೊಂದು ಪ್ರಕರಣ; ಶಾಲಾ ಆವರಣದಲ್ಲಿಯೇ 16 ವರ್ಷದ ಬಾಲಕಿ ವಿಧಿವಶ

ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಮತ್ತೊಂದು ಪ್ರಕರಣ; ಶಾಲಾ ಆವರಣದಲ್ಲಿಯೇ 16 ವರ್ಷದ ಬಾಲಕಿ ವಿಧಿವಶ

ಇತ್ತೀಚಿನ ದಿನಗಳಲ್ಲಿ ಹದಿಹರೆಯದವರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಇದಕ್ಕೆ ಈಗ ಮತ್ತೊಂದು ಘಟನೆ ಸೇರ್ಪಡೆಯಾಗಿದ್ದು, ಇಂದೋರ್ ನ 16 ವರ್ಷದ ಬಾಲಕಿ ಸಾವಿಗೀಡಾಗಿದ್ದಾಳೆ.

ಇಂದೋರ್ ನ ಅನ್ನಪೂರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಶಾಲೆಯಲ್ಲಿ 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವೃಂದಾ ತ್ರಿಪಾಠಿ ಸ್ನೇಹಿತೆಯರೊಂದಿಗೆ ಆಟವಾಡುತ್ತಿದ್ದಾಗಲೇ ಕುಸಿದು ಬಿದ್ದಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಕೆಯನ್ನು ಶಾಲಾ ಸಿಬ್ಬಂದಿ ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಾಗಲೇ ಮೃತಪಟ್ಟಿದ್ದಾಳೆ. ಮೇಲ್ನೋಟಕ್ಕೆ ಹೃದಯಾಘಾತದಿಂದ ಬಾಲಕಿ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಖಚಿತ ಕಾರಣ ಬಹಿರಂಗವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular