HomeIndiaವಾಟ್ಸಾಪ್ ನಲ್ಲಿ ಸೆಂಡ್ ಆಯ್ತು ನಗ್ನ ಚಿತ್ರ: ವಿದ್ಯಾರ್ಥಿನಿಗೆ ಬೆತ್ತಲೆ ಫೋಟೋ ಕಳಿಸಿದ ಶಿಕ್ಷಕನ ವಿರುದ್ಧ...

ವಾಟ್ಸಾಪ್ ನಲ್ಲಿ ಸೆಂಡ್ ಆಯ್ತು ನಗ್ನ ಚಿತ್ರ: ವಿದ್ಯಾರ್ಥಿನಿಗೆ ಬೆತ್ತಲೆ ಫೋಟೋ ಕಳಿಸಿದ ಶಿಕ್ಷಕನ ವಿರುದ್ಧ ದೂರು

ಉತ್ತರಾಖಂಡದ ಶಾಲೆಯೊಂದರ ಶಿಕ್ಷಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. 10ನೇ ತರಗತಿಯ ವಿದ್ಯಾರ್ಥಿನಿ ಈ ಬಗ್ಗೆ ಆರೋಪ ಮಾಡಿದ್ದಾಳೆ. ಶಿಕ್ಷಕನು ತನಗೆ ಕಿರುಕುಳ ನೀಡಿದ್ದಾನೆ. ವಾಟ್ಸಾಪ್ ಮತ್ತು ಸ್ನ್ಯಾಪ್‌ಚಾಟ್‌ನಲ್ಲಿ ತನಗೆ ಅನುಚಿತ ಚಿತ್ರಗಳನ್ನು ಕಳುಹಿಸಿದ್ದಾನೆ ಎಂದು ಹುಡುಗಿ ಹೇಳಿಕೊಂಡಿದ್ದಾಳೆ.

16 ವರ್ಷದ ಸಂತ್ರಸ್ತೆ ತನ್ನ ಪೋಷಕರಿಗೆ ಘಟನೆಯನ್ನು ತಿಳಿಸಿದ್ದು, ನಂತರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಹಲ್ದ್ವಾನಿಯ ಖಾಸಗಿ ಶಾಲೆಯೊಂದರ ಶಿಕ್ಷಕರೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ವಿದ್ಯಾರ್ಥಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. ನಾವು ದೂರನ್ನು ಸ್ವೀಕರಿಸಿದ್ದೇವೆ ಮತ್ತು ತನಿಖೆ ಪ್ರಾರಂಭಿಸಿದ್ದೇವೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಹಲ್ದ್ವಾನಿ ವೃತ್ತದ ಅಧಿಕಾರಿ ನಿತಿನ್ ಲೋಹಾನಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೇ ಶಾಲೆಯಲ್ಲಿ ಪಾಠ ಮಾಡುತ್ತಿದ್ದ ಆರೋಪಿ ಶಿಕ್ಷಕ, ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾನೆ. ಆಕೆಗೆ ಸಂದೇಶಗಳನ್ನು ಕಳುಹಿಸಿದ್ದಾನೆ, ವಿದ್ಯಾರ್ಥಿನಿ ತನ್ನ ಪೋಷಕರಿಗೆ ಹೇಳಿದಾಗ ವಿಷಯ ಬೆಳಕಿಗೆ ಬಂದಿದೆ, ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular