BIG NEWS: ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ: ನಟಿ ಶಬಾನಾ ಅಜ್ಮಿ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ

ಬೆಂಗಳೂರು: 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಶಬಾನಾ ಅಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಗೆ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.

2024-25ನೇ ಸಾಲಿನ 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ರಚಿಸಿದ್ದ ಆಯ್ಕೆ ಸಮಿತಿ ಮೂವರು ಸಂಭಾವ್ಯರ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಅವರಲ್ಲಿ ನಟಿ ಶಬಾನಾ ಅಜ್ಮಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದು, 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾದ ಭಾರತೀಯ ಚಿತ್ರರಂಗದ ಮೇರು ನಟಿ ಶಬಾನಾ ಅಜ್ಮಿ ಅವರಿಗೆ ಅಭಿನಂದನೆಗಳು.

70ರ ದಶಕದಲ್ಲಿ ಕನ್ನೇಶ್ವರ ರಾಮ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿ ಕನ್ನಡ ಸಿನಿರಸಿಕರ ಹೃದಯಗೆದ್ದ ಶಬಾನಾ ಅವರು ದಕ್ಷಿಣ  ಭಾರತದ ಚಿತ್ರಗಳು ಹಾಗೂ ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ ನಟಿಸಿ, ಸೈ ಎನಿಸಿಕೊಂಡವರು. ಸುಮಾರು 50 ವರ್ಷಗಳ ಕಾಲ ಅವರ ಸೇವೆಗೆ ಸಂದ ಈ ಗೌರವ ಪ್ರಶಸ್ತಿಯ ಘನತೆಯನ್ನು ಹೆಚ್ಚಿಸಿವೆ ಎಂದು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read