BREAKING : ಹೈದರಾಬಾದ್ ಅಗ್ನಿ ಅವಘಡದಲ್ಲಿ 17 ಮಂದಿ ದಾರುಣ ಸಾವು : ಮೃತರ ಕುಟುಂಬಕ್ಕೆ ತಲಾ 7 ಲಕ್ಷ ಪರಿಹಾರ ಘೋಷಣೆ

ಹೈದರಾಬಾದ್: ಹೈದರಾಬಾದ್ನ ಐತಿಹಾಸಿಕ ಚಾರ್ಮಿನಾರ್ ಬಳಿಯ ಕಟ್ಟಡವೊಂದರಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಎಂಟು ಮಕ್ಕಳು ಮತ್ತು ಐದು ಮಹಿಳೆಯರು ಸೇರಿದಂತೆ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ.

ಬೆಂಕಿಗೆ ಕಾರಣ ಇನ್ನೂ ದೃಢಪಟ್ಟಿಲ್ಲವಾದರೂ, ಶಾರ್ಟ್ ಸರ್ಕ್ಯೂಟ್ ದುರಂತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.. ಹನ್ನೊಂದು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸಿ, ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ಮೃತರ ಕುಟುಂಬಕ್ಕೆ ತೆಲಂಗಾಣ ಸರ್ಕಾರ ತಲಾ 5 ಲಕ್ಷ ರೂ ಹಾಗೂ ಪ್ರಧಾನಿ ಮೋದಿ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಮತ್ತು ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಘಟನೆ ನಡೆದ ಪ್ರದೇಶದಲ್ಲಿ ಆಭರಣ ಅಂಗಡಿಗಳ ಸಾಲು ಇದ್ದು, ಇದು ಪ್ರಸಿದ್ಧ ಚಾರ್ಮಿನಾರ್‌ಗೆ ಬಹಳ ಹತ್ತಿರದಲ್ಲಿದೆ. ಈ ಪ್ರದೇಶದಲ್ಲಿರುವ ಈ ಅಂಗಡಿಗಳಲ್ಲಿ ಹಲವು ಒಂದು ಶತಮಾನಕ್ಕೂ ಹೆಚ್ಚು ಹಳೆಯವು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read