HomeKarnatakaBIG NEWS: ಬಿರಿಯಾನಿ ಸೇವಿಸಿ 17 ಜನರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

BIG NEWS: ಬಿರಿಯಾನಿ ಸೇವಿಸಿ 17 ಜನರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಕಾರ್ಯಕ್ರಮವೊಂದರಲ್ಲಿ ಬಿರಿಯಾನಿ ಊಟ ಸೇವಿಸಿದ್ದ 17 ಜನರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ.

ಅಸ್ವಸ್ಥರನ್ನು ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಕಾರ್ಯಕ್ರಮದಲ್ಲಿ ಸಂಬಂಧಿಕರಿಗಾಗಿ ಬಿರಿಯಾನಿ ಊಟ ನೀಡಲಾಗಿತ್ತು. ಊಟ ಸೇವಿಸಿ ಮನೆಗೆ ವಾಪಾಸ್ಸಾದವರಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಸ್ವಸ್ಥಗೊಂಡ 17 ಜನರನ್ನು ಕಡೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಸ್ವಸ್ಥರಲ್ಲಿ 9 ಮಹಿಳೆಯರಿದ್ದಾರೆ. ಸದ್ಯ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ತಾಲೂಕು ಆಸ್ಪತ್ರೆಗೆ ಕೆ.ಎಸ್.ಆನಂದ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular