ಬೆಂಗಳೂರು : 125 ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿನ 170 ಮಿ.ಮೀ. ಮಳೆ ಬಿದ್ದಿದೆ. ಮಳೆ ಹೆಚ್ಚಾಗಿ ಬಿತ್ತು, ನಾವೇನು ಮಾಡೋದು ಎಂದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ನಾವು ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
125 ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿನ 170 ಮಿ.ಮೀ. ಮಳೆ ಬಿದ್ದಿದೆ. ಮಳೆ ಹೆಚ್ಚಾಗಿ ಬಿತ್ತು, ನಾವೇನು ಮಾಡೋದು ಎಂದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ನಾವು ಮಾಡಲ್ಲ. ಈ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿ ಸರ್ಕಾರಕ್ಕೆ ಇರಬೇಕಾಗುತ್ತದೆ. ಈ ಭಾಗದ ಸುಮಾರು ಸಾವಿರಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಗಳನ್ನು ಮಾಡಲಾಗುತ್ತಿದೆ. ಈ ವರ್ಷ ಮಳೆ ಜಾಸ್ತಿ ಆಗಿದ್ದು, ಇನ್ನೂ ಹೆಚ್ಚು ಮೂಲಸೌಕರ್ಯಗಳ ಅಭಿವೃದ್ಧಿ ಆಗಬೇಕಿದೆ. ರಾಜಕಾಲುವೆಗಳಲ್ಲಿ ಒತ್ತುವರಿ ತೆರವು ಮಾಡಿಸಬೇಕೆಂದು ಹಿಂದೆ ಸಿಎಂ ಆಗಿದ್ದಾಗಲೂ ಸೂಚನೆ ನೀಡಿದ್ದೆ, ಈಗಲೂ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಬಾಬುಸಾಬ್ ಪಾಳ್ಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತಗೊಂಡು ಹಲವು ಕಾರ್ಮಿಕರು ಸಾವಿಗೀಡಾದ ಸ್ಥಳಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿ, ಘಟನೆಯಲ್ಲಿ ಮಡಿದವರ ಕುಟುಂಬಕ್ಕೆ ಸಾಂತ್ವನ ಹೇಳಿದೆ. ನಿಯಮಬಾಹಿರವಾಗಿ, ಸೂಕ್ತ ಪರವಾನಗಿ ಪಡೆಯದೆ ಕಟ್ಟಡ ನಿರ್ಮಾಣಕ್ಕೆ ಮುಂದಾಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ವಿಭಾಗೀಯ ಅಧಿಕಾರಿಗೂ ನೋಟಿಸ್ ನೀಡಿ ಕ್ರಮ ಕೈಗೊಳ್ಳಬೇಕು. ಅನಧಿಕೃತ ಕಟ್ಟಡ ನಿರ್ಮಾಣ ನಿಲ್ಲಿಸುವಂತೆ ನೋಟಿಸ್ ನೀಡಿದ್ದರೂ ಕೆಲಸ ಮುಂದುವರೆಸಿದ ಮಾಲೀಕರು, ಗುತ್ತಿಗೆದಾರ, ಎಂಜಿನಿಯರ್ ಎಲ್ಲರ ವಿರುದ್ಧವೂ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಬಿಬಿಎಂಪಿ ಆಯುಕ್ತರಾದ ತುಷಾರ ಗಿರಿನಾಥ್ ಅವರಿಗೆ ಸೂಚನೆ ನೀಡಿದ್ದೇನೆ. ಮುಂದೆ ಇಂತಹ ದುರ್ಘಟನೆಗಳು ನಡೆಯದ ರೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದರು.
https://twitter.com/siddaramaiah/status/1849348378989056087?ref_src=twsrc%5Egoogle%7Ctwcamp%5Eserp%7Ctwgr%5Etweet
https://twitter.com/siddaramaiah/status/1849331984213958769?ref_src=twsrc%5Egoogle%7Ctwcamp%5Eserp%7Ctwgr%5Etweet