ಗೆಳತಿಯ ಅಮ್ಮ ನೋಡಿದರೆಂದು ಟೆರೇಸ್‌ನಿಂದ ಹಾರಿ ಪ್ರಾಣ ಕಳೆದುಕೊಂಡ ಯುವಕ

ಚೆನ್ನೈ: 18ರ ಹರೆಯದ ಕಾನೂನು ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯ ಅಪಾರ್ಟ್‌ಮೆಂಟ್‌ನ ಎರಡನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದಾನೆ. ಯುವತಿಯ ತಾಯಿ ಇವರಿಬ್ಬರು ತಡರಾತ್ರಿಯವರೆಗೆ ಮಾತನಾಡಿರುವುದನ್ನು ನೋಡಿದ್ದು, ಅವರ ವಿಚಾರಣೆ ನಡೆಸಲಾಗುತ್ತಿದೆ.

ತಮಿಳುನಾಡಿನ ಸೇಲಂ ಸಮೀಪದ ಚಿನ್ನಾ ಕೋಲ್ಪಟ್ಟಿಯಲ್ಲಿ ಶನಿವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, 18 ವರ್ಷದ ಸಂಜಯ್ ಚಿನ್ನಾ ಕೊಳಪಟ್ಟಿಯ ಸೆಂಟ್ರಲ್ ಕಾನೂನು ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಯಾಗಿದ್ದ.

ಇವರಿಬ್ಬರೂ ಪ್ರೇಮಿಗಳಾಗಿದ್ದರು. ಇವರಿಬ್ಬರೂ ಮಾತನಾಡುತ್ತಿದ್ದ ವೇಳೆ ಯುವತಿಯ ತಾಯಿ ನೋಡಿದ್ದ ಹಿನ್ನೆಲೆಯಲ್ಲಿ ಯುವಕ ಟೆರೇಸ್‌ನಿಂದ ತಪ್ಪಿಸಿಕೊಳ್ಳಲು ಜಿಗಿದಿದ್ದಾನೆ. ಆಗ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಸಂಜಯ್ ಮತ್ತು ಅವನ ಗೆಳತಿ ಪರಸ್ಪರ ಮಾತನಾಡುತ್ತಿದ್ದರು. ಆ ಸಂದರ್ಭದಲ್ಲಿ ಹುಡುಗಿಯ ತಾಯಿ ಕೂಡ ಟೆರೇಸ್‌ಗೆ ಬಂದರು. ಸಿಕ್ಕಿ ಬೀಳುವುದರಿಂದ ತಪ್ಪಿಸಿಕೊಳ್ಳಲು ಸಂಜಯ್ ಅಪಾರ್ಟ್‌ಮೆಂಟ್‌ನ ಎರಡನೇ ಮಹಡಿಯಿಂದ ಜಿಗಿದಿದ್ದಾನೆ. ಪರಿಣಾಮ ತಲೆ ನೆಲಕ್ಕೆ ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೇಲಂ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read