ಬೆಂಗಳೂರು : ರಾಜ್ಯದಲ್ಲಿ ಶೀಘ್ರವೇ 18,000 ಉಪನ್ಯಾಸಕ ಹಾಗೂ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಸರ್ಕಾರಿ ಹಾಗೂ ಅನುದಾನಿತ ಶಾಲೆ ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ 10 ಸಾವಿರ ಶಿಕ್ಷಕರು ಹಾಗೂ ಉಪನ್ಯಾಸಕರ ನೇಮಕಾತಿ ಮಾಡಲು ನಿರ್ಧರಿಸಲಾಗಿದೆ ಎಂದರು.ನವೆಂಬರ್ ಇಲ್ಲದೇ ಡಿಸೆಂಬರ್ ನಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಿದ ನಂತರ ಸಿಇಟಿ ಮೂಲಕ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದರು.
ಪ್ರಪ್ರಥಮ ಬಾರಿಗೆ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (KPS) ಉನ್ನತೀಕರಣ ಮಾಡಲಾಗುವುದು . ರಾಜ್ಯದಲ್ಲಿ ಶಾಲಾ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ರಾಜ್ಯಾದ್ಯಂತ ಒಟ್ಟು 800 ಸರ್ಕಾರಿ ಶಾಲೆಗಳನ್ನು ಒಂದೇ ಬಾರಿಗೆ ಉನ್ನತೀಕರಿಸಿ, ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (Karnataka Public Schools) ಪರಿವರ್ತಿಸಲು ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿ, ಪ್ರತಿ ಶಾಲೆಯನ್ನು ₹4.00ಕೋಟಿ ಅಂದಾಜು ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು. ಸದರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿ.ಯು.ಸಿ ವರೆಗೆ ಒಂದೇ ಸೂರಿನಡಿ ವಿದ್ಯಾಬ್ಯಾಸಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.