HomeAgricultureಬಗರ್ ಹುಕುಂ ಅರ್ಜಿ ಇತ್ಯರ್ಥ ಮಾಡದೇ ರೈತರನ್ನು ಒಕ್ಕಲೆಬ್ಬಿಸುವಂತಿಲ್ಲ: ಕೃಷ್ಣ ಬೈರೇಗೌಡ

ಬಗರ್ ಹುಕುಂ ಅರ್ಜಿ ಇತ್ಯರ್ಥ ಮಾಡದೇ ರೈತರನ್ನು ಒಕ್ಕಲೆಬ್ಬಿಸುವಂತಿಲ್ಲ: ಕೃಷ್ಣ ಬೈರೇಗೌಡ

ಬೆಂಗಳೂರು: ಬಗರ್ ಹುಕುಂ ಯೋಜನೆಯಡಿ ಸಲ್ಲಿಕೆಯಾದ ನಮೂನೆ 53 ಮತ್ತು ನಮೂನೆ 57ರ ಅರ್ಜಿಗಳು ವಿಲೇವಾರಿಯಾಗದೇ ರೈತರ ಬೆಳೆ ನಾಶ ಮಾಡುವುದು ಅಥವಾ ಒಕ್ಕಲಿಬ್ಬಿಸುವ ಕ್ರಮಕ್ಕೆ ಮುಂದಾಗಬಾರದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಶೈಲೇಂದ್ರ ಬೆಲ್ದಾಳೆ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಅಂತಹ ಘಟನೆ ನಡೆದಲ್ಲಿ ಕೂಡಲೇ ನನ್ನ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಗರ್ ಹುಕುಂ ಯೋಜನೆಯಡಿ ಸಲ್ಲಿಕೆಯಾದ ಅರ್ಜಿಗಳು ಇತ್ಯರ್ಥವಾಗುವ ಮೊದಲು ಅರ್ಜಿದಾರರನ್ನು ಒಕ್ಕಲೆಬ್ಬಿಸಲು ಸಾಧ್ಯವಿಲ್ಲ. ಅಲ್ಲದೆ, ಅರ್ಜಿ ಹಾಕಿರುವ ಕಡೆ ರೈತರ ಬೆಳೆ ಕಟಾವು ಮಾಡಲು ಅಡ್ಡಿಪಡಿಸಬಾರದು ಎಂದು ಸ್ಪಷ್ಟವಾದ ಕಾನೂನು ರೂಪಿಸಲಾಗಿದೆ. ಬಗರ್ ಹುಕುಂಗೆ ಸಂಬಂಧಿಸಿದಂತೆ ಇಷ್ಟು ಸ್ಪಷ್ಟವಾಗಿ ಹಿಂದೆ ಯಾವತ್ತೂ ಸುತ್ತೋಲೆ ಹೊರಡಿಸಿರಲಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಗರಕುಂ ಯೋಜನೆಯಡಿ ಭೂ ಮಂಜೂರು ಮಾಡಲು ರಾಜ್ಯದಲ್ಲಿ 185 ಸಮಿತಿ ರಚಿಸಲಾಗಿದ್ದು, ಉಳಿದ ಸಮಿತಿಗಳನ್ನು ಕೂಡ ರಚಿಸಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular