HomeKarnatakaಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 188 ಇಂದಿರಾ ಕ್ಯಾಂಟೀನ್ ಆರಂಭಿಸಲು ಸರ್ಕಾರ ನಿರ್ಧಾರ

ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 188 ಇಂದಿರಾ ಕ್ಯಾಂಟೀನ್ ಆರಂಭಿಸಲು ಸರ್ಕಾರ ನಿರ್ಧಾರ

ಬೆಂಗಳೂರು: ಬಿಬಿಎಂಪಿ ಹೊರತುಪಡಿಸಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎರಡನೇ ಹಂತದಲ್ಲಿ 188 ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ 188 ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಲು ನಿರ್ಧರಿಸಿದ್ದು, ಇದಕ್ಕಾಗಿ 154 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಕೆಟಿಪಿಪಿ 4ಜಿ ಕಲಂನಿಂದ ವಿನಾಯಿತಿ ನೀಡುವ ಪ್ರಮುಖ ನಿರ್ಧಾರ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊದಲ ಹಂತದಲ್ಲಿದ್ದಂತೆ ಇಂದಿರಾ ಕ್ಯಾಂಟೀನ್ ಅಡುಗೆ ಕೋಣೆ ಸಹಿತ ಪ್ರಿಕಾಸ್ಟ್ ವಿಧಾನ ಮತ್ತು ವಿನ್ಯಾಸದಲ್ಲೇ ಈ 188 ಇಂದಿರಾ ಕ್ಯಾಂಟೀನ್ ಗಳನ್ನು ನಿರ್ಮಿಸಲು ಮೆ. ಎಕ್ಸೆಲ್ ಪ್ರಿಕಾಸ್ಟ್ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಗುತ್ತಿಗೆ ನೀಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular