BIG NEWS: ರಾಜ್ಯದಲ್ಲಿ ಓಪನ್ ಆಗಲಿದೆ ಮತ್ತೆ 188 ಇಂದಿರಾ ಕ್ಯಾಂಟೀನ್

ಬೆಳಗಾವಿ: ರಾಜ್ಯದಲ್ಲಿ ಮತ್ತೆ 188 ಹೊಸ ಇಂದಿರಾ ಕ್ಯಾಂಟೀನ್ ತೆರೆಯಲಾಗುವುದು ಎಂದು ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಭೈರತಿ ಸುರೇಶ್, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಗಳಲ್ಲಿ ಶೀಘ್ರವೇ ಇಂದಿರಾ ಕ್ಯಾಂಟೀನ್ ತೆರೆಯಲಾಗುವುದು ಎಂದರು.

ಹಿಂದಿನ ಬಿಜೆಪಿ ಸರ್ಕಾರ ರಾಜಕೀಯ ದುರುದ್ದೇಶಕ್ಕಾಗಿ ರಾಜ್ಯದಲ್ಲಿನ ಇಂದಿರಾ ಕ್ಯಾಂಟೀನ್ ಗಳನ್ನು ಅದೋಗತಿಗೆ ತಂದಿತು. ಇಂದಿರಾ ಕ್ಯಾಂಟೀನ್ ಸಿಎಂ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಿರ್ವಹಣೆ ಆಗದ ಕಾರಣ ಹಲವು ಕ್ಯಾಂಟೀನ್ ಗಳು ಬಾಗಿಲು ಮುಚ್ಚಿದವು. ಈಗ ಎಲ್ಲೆಡೆ ಇಂದಿರಾ ಕ್ಯಾಂಟೀನ್ ಮತ್ತೆ ಪುನರಾರಂಭವಾಗಲಿದ್ದು, ಶೀಘ್ರವೇ ಕಾರ್ಯ ನಿರ್ವಹಿಸಲಿದೆ ಎಂದರು.

ಇದರಿಂದ ಬಡವರು, ಕೂಲಿಕಾರ್ಮಿಕರಿಗೆ ಅನುಕೂಲವಾಗಲಿದ್ದು, ಪಾಲಿಕೆ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ಗಳಿಗೆ ಮತ್ತೆ ಉತ್ತೇಜನ ಸಿಗಲಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read