ಹಳೆ ಹುಲಿಗಳ ಸೇರ್ಪಡೆಯಿಂದ ಟೀಂ ಇಂಡಿಯಾ ಬಲಿಷ್ಠ: ಏಕದಿನ ಸರಣಿಯಲ್ಲೂ ಲಂಕಾ ಬಗ್ಗು ಬಡಿಯಲು ಸಜ್ಜು

ಗುವಾಹಟಿ: ಭಾರತ ಮತ್ತು ಶ್ರೀಲಂಕಾ ನಡುವಿನ 3 ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯ ಇಂದು ಗುವಾಹಟಿಯಲ್ಲಿ ನಡೆಯಲಿದೆ.

ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಧ್ಯಾಹ್ನ 1.30 ರಿಂದ ಮೊದಲ ಪಂದ್ಯ ನಡೆಯಲಿದೆ. ಭಾರತದ ಕೊನೆಯ ಎರಡು ದ್ವಿಪಕ್ಷೀಯ ಸರಣಿಗಳನ್ನು ಕಳೆದುಕೊಂಡಿರುವ ನಾಯಕ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲು ಮರಳಲಿದ್ದಾರೆ.

ಜಸ್ಪ್ರೀತ್ ಬುಮ್ರಾ ಅವರ ಬೆನ್ನಿನ ಒತ್ತಡದ ಮುರಿತದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ವಿಫಲವಾದ ನಂತರ ಕ್ರಮಕ್ಕೆ ಮರಳುವುದು ಈಗ ಮತ್ತಷ್ಟು ವಿಳಂಬವಾಗಿದೆ. ಭಾರತದ ಹಿರಿಯ ವೇಗಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಭಾರತ ಕೊನೆಯ ಬಾರಿಗೆ ಜುಲೈ 2021 ರಲ್ಲಿ ಶ್ರೀಲಂಕಾ ವಿರುದ್ಧ ಏಕದಿನ ಸರಣಿಯನ್ನು ಆಡಿತ್ತು.

ನಾಯಕ ರೋಹಿತ್ ಶರ್ಮ, ಮಾಜಿ ನಾಯಕ ವಿರಾಟ್ ಕೊಹ್ಲಿ, ವಿಕೆಟ್ ಕೀಪರ್ ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿರುವುದರಿಂದ ಟೀಂ ಇಂಡಿಯಾ ಬಲಿಷ್ಠವಾಗಿದ್ದು, ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಶುಭಾರಂಭದ ನಿರೀಕ್ಷೆಯಲ್ಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read