2 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಸಂವಿಧಾನಬದ್ಧ; ಸುಪ್ರೀಂ ಕೋರ್ಟ್ ಮಹತ್ವದ ಅಭಿಮತ

ಯಾವುದೇ ಒಬ್ಬ ವ್ಯಕ್ತಿ ಏಕಕಾಲದಲ್ಲಿ ಎರಡು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುವುದು ಸಂವಿಧಾನ ಬದ್ಧ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೆ ಇದನ್ನು ನಿರ್ಬಂಧಿಸುವಂತೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಹಿರಿಯ ವಕೀಲ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿ ಪಿ.ಎಸ್. ನರಸಿಂಹನ್ ಹಾಗೂ ನ್ಯಾಯಮೂರ್ತಿ ಜೆ.ಬಿ. ಪರಿದಿವಾಲ ಅವರನ್ನು ಒಳಗೊಂಡ ತ್ರಿ ಸದಸ್ಯ ಪೀಠ ಈ ಮಹತ್ವದ ಅಭಿಪ್ರಾಯವನ್ನು ವ್ಯಕ್ತಪಡಿಸಿತು.

ರಾಜಕೀಯ ನಾಯಕರು ರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುವ ಸಲುವಾಗಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಾರೆ. ಅಲ್ಲದೆ ಇದು ಶಾಸಕಾಂಗ ನೀತಿಯಾಗಿದ್ದು, ಒಂದಕ್ಕಿಂತ ಅಧಿಕ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಕುರಿತು ಸಂಸತ್ ತೀರ್ಮಾನ ಮಾಡಬೇಕು. ಹಾಗೆಯೇ ಎರಡು ಕಡೆಗಳಲ್ಲಿ ಸ್ಪರ್ಧಿಸುವುದು ಅಸಂವಿಧಾನಿಕವಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read