HomeKarnatakaಜನಗಣತಿ ಕಾರ್ಯಕ್ಕೆ 2.5 ಲಕ್ಷ ಸರ್ಕಾರಿ ನೌಕರರು: ವಿವಿಧ ಇಲಾಖೆಗಳ ಸೇವೆ ವ್ಯತ್ಯಯ

ಜನಗಣತಿ ಕಾರ್ಯಕ್ಕೆ 2.5 ಲಕ್ಷ ಸರ್ಕಾರಿ ನೌಕರರು: ವಿವಿಧ ಇಲಾಖೆಗಳ ಸೇವೆ ವ್ಯತ್ಯಯ

ಬೆಂಗಳೂರು: ಜನಗಣತಿ ಕಾರ್ಯಕ್ಕೆ ಬಹುತೇಕ ಇಲಾಖೆಗಳ ಸಿಬ್ಬಂದಿ ಬಳಸಿಕೊಳ್ಳುತ್ತಿರುವುದರಿಂದ ಪ್ರಮುಖವಾಗಿ ಕಂದಾಯ, ಶಿಕ್ಷಣ, ಸ್ಥಳೀಯ ಸಂಸ್ಥೆ, ಬೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂಗಳು, ಕೃಷಿ ಇಲಾಖೆಗಳಿಂದ ಜನರಿಗೆ ಸಕಾಲಕ್ಕೆ ಸೇವೆ ಸಿಗದೆ ವ್ಯತ್ಯಯವಾಗಿದೆ ಎನ್ನುವ ದೂರುಗಳು ಕೇಳಿ ಬಂದಿವೆ.

ಏಪ್ರಿಲ್ 16ರಿಂದ ಒಂದು ತಿಂಗಳ ಕಾಲ ರಾಜ್ಯದಲ್ಲಿ ಮನೆಗಣತಿ ಕಾರ್ಯ ನಡೆಯಲಿದೆ. ಇದಕ್ಕಾಗಿ ಅಧಿಕಾರಿಗಳಿಗೆ ವಿವಿಧ ಹಂತಗಳ ತರಬೇತಿ ನೀಡಲಾಗಿದೆ. ತರಬೇತಿ ಅವಧಿಯಲ್ಲಿ ರಾಜ್ಯವ್ಯಾಪಿ ವಿವಿಧ ಸೇವೆಗಳಲ್ಲಿ ವ್ಯತ್ಯಯವಾಗಿದೆ. ಗಣತಿಗೆ 2.5 ಲಕ್ಷ ನೌಕರರನ್ನು ಏಕಕಾಲಕ್ಕೆ ತೆರಳಿದರೆ ಸೇವೆಯಲ್ಲಿ ಇನ್ನಷ್ಟು ವ್ಯತ್ಯಯವಾಗಲಿದೆ.

ಜನಗಣತಿಗೆ ಪೂರ್ವಭಾವಿಯಾಗಿ ಹಂತ ಹಂತವಾಗಿ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ಮಾಸ್ಟರ್ ಟ್ರೈನರ್ ತರಬೇತಿ ಮುಗಿದಿದ್ದು, ಗಣತಿದಾರರಿಗೆ ಏಪ್ರಿಲ್ 1ರಿಂದ 9ರವರೆಗೆ ಮೂರು ಹಂತದಲ್ಲಿ ತರಬೇತಿ ನೀಡಲಾಗುತ್ತದೆ. ಏ. 16ರಿಂದ ಮನೆಗಣತಿ ಕಾರ್ಯ ನಡೆಯಲಿದೆ. ನಿಯೋಜಿತ ಸಿಬ್ಬಂದಿ ಕಡ್ಡಾಯವಾಗಿ ತರಬೇತಿ ಪಡೆಯದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಣತಿ ಕಾರ್ಯಕ್ಕೆ ಶಿಕ್ಷಣ, ಕಂದಾಯ, ತೆರಿಗೆ ಇಲಾಖೆ, ಕೃಷಿ, ಇಂಧನ ಸೇರಿದಂತೆ ಎಲ್ಲಾ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಆಯ್ಕೆ ಮಾಡಿ ತರಬೇತಿ ಕೊಡಲಾಗುತ್ತಿದೆ. ರಾಜ್ಯದೆಲ್ಲೆಡೆ ಗಣತಿದಾರರಿಗೆ ತರಬೇತಿ ನೀಡುತ್ತಿರುವುದರಿಂದ ಪ್ರಮುಖ ಇಲಾಖೆಗಳ ಸೇವೆಯಲ್ಲಿ ವ್ಯತ್ಯಯವಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular